HomeExclusive Newsಈವಾರ ಅಬ್ಬರಿಸಲಿದೆ ಅಗ್ರಸೇನಾ

ಈವಾರ ಅಬ್ಬರಿಸಲಿದೆ ಅಗ್ರಸೇನಾಮುರುಗೇಶ್ ಕಣ್ಣಪ್ಪ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಅಗ್ರಸೇನಾ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣಲಿದೆ. ಶ್ರೀಮತಿ ಮಮತಾ ಜಯರಾಮರೆಡ್ಡಿ ಹಾಗೂ ಜಯರಾಮರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.


ಹಳ್ಳಿ ಹಾಗೂ ನಗರದಲ್ಲಿ ಡಬಲ್ ಟ್ರ್ಯಾಕ್ ನಲ್ಲಿ ಸಾಗುವ ಕಥಾಹಂದರ ಈ ಚಿತ್ರದಲ್ಲಿದ್ದು, ತಂದೆ-ಮಗನ ಸಂಬಂಧದ ಕಥೆ ಒಂದು ಕಡೆಯಾದರೆ, ನಾಯಕ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಹೇಗೆ ಹೋರಾಡುತ್ತಾನೆ ಎನ್ನುವುದು ಮತ್ತೊಂದು ಟ್ರಾಕ್‌ನಲ್ಲಿ ಸಾಗುತ್ತದೆ.
ಆಕ್ಷನ್ ಫ್ಯಾಮಿಲಿ, ಲವ್, ಸೆಂಟಿಮೆಂಟ್ ಎಲ್ಲಾ ರೀತಿಯ ಅಂಶಗಳನ್ನು ಒಳಗೊಂಡ ಈ ಚಿತ್ರದಲ್ಲಿ ಅಮರ್ ವಿರಾಜ್ ಹಾಗೂ ಅಗಸ್ತ್ಯ ಬೆಳಗೆರೆ ಇಬ್ಬರು ನಾಯಕರಾಗಿ ಕಾಣಿಸಿಕೊಂಡಿದ್ದಾರೆ, ರಚನಾ ದಶರಥ್, ಭಾರತಿ ಹೆಗ್ಡೆ ನಾಯಕಿಯರಾಗಿ ನಟಿಸಿದ್ದಾರೆ. ಅಲ್ಲದೆ ಚಿತ್ರದಲ್ಲಿ ಹಿರಿಯನಟ ರಾಮಕೃಷ್ಣ ಅವರು ಗ್ರಾಮದ ಮುಖಂಡ ಸೂರಪ್ಪ ಹಾಗೂ ನಾಯಕನ ತಂದೆಯ ಪಾತ್ರ ನಿರ್ವಹಿಸಿದ್ದು, ಇದು ಅವರ ೨೦೦ನೇ ಚಿತ್ರ ಎನ್ನುವುದು ವಿಶೇಷ.


ಸಂಗೀತ ನಿರ್ದೇಶಕ ಎಂ.ಎಸ್. ತ್ಯಾಗರಾಜ್ ಅವರು ಚಿತ್ರದ ೬ ಹಾಡುಗಳನ್ನು ಕಂಪೋಜ್ ಮಾಡಿದ್ದಾರೆ. ಆರ್.ಪಿ.ರೆಡ್ಡಿ ಅವರ ಛಾಯಾಗ್ರಹಣ, ಚೇತನ್ ಕುಮಾರ್, ಗೌಸ್‌ಪೀರ್, ವಿಜಯ್, ಶಿವು ಬೆರಗಿ ಅವರ ಸಾಹಿತ್ಯ, ವಿಜಯ್ ಎಂ. ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ನಿರ್ಮಾಪಕರ ಪುತ್ರಿ ತನಿಶರೆಡ್ಡಿ ಸಹ ಚಿತ್ರದ ಪುಟ್ಟ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

RELATED ARTICLES

Most Popular

Share via
Copy link
Powered by Social Snap