HomeNews'ಆಕಾಶವಾಣಿ ಮೈಸೂರು ಕೇಂದ್ರ' ದಿಂದ ಬಂತು ಹೊಸ ಹಾಡು

‘ಆಕಾಶವಾಣಿ ಮೈಸೂರು ಕೇಂದ್ರ’ ದಿಂದ ಬಂತು ಹೊಸ ಹಾಡು

‘ಆಕಾಶವಾಣಿ ಮೈಸೂರು ಕೇಂದ್ರ’ ವಿಭಿನ್ನ ಟೈಟಲ್‌ ವುಳ್ಳ ಚಿತ್ರ ರಿಲೀಸ್‌ ಗೂ ಮುನ್ನ ಗಮನ ಸೆಳೆಯುತ್ತಿದೆ. ಸತೀಶ್ ಬತ್ತುಲ ನಿರ್ದೇಶನದ ಚಿತ್ರದಿಂದ ಹೊಸ ಹಾಡೊಂದು ರಿಲೀಸ್‌ ಆಗಿದೆ.


‘ನಮ್ ಕನಸ ಕನ್ನಡ …’ ಹಾಡು ಬಿಡುಗಡೆಯಾಗಿದ್ದು, ಎಲ್.ಎನ್.ಸೂರ್ಯ ಸಾಹಿತ್ಯ ರಚಿಸಿರುವ ಸಾಹಿತ್ಯಕ್ಕೆ ಜನಾರ್ದನ್ ಮತ್ತು ಸಿ.ಎಚ್.ಶ್ರೀಕೃತಿ ಧ್ವನಿಯಾಗಿದ್ದಾರೆ.
ಕಾರ್ತಿಕ್ ಕೊಡಕಂಡ್ಲ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಈ ಹಾಡು ಇದೀಗ ಯೂಟ್ಯೂಬ್ನ ಮಿಥುನ ಮ್ಯೂಸಿಕ್ ಚಾನಲ್ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿ ಕೇಳುಗರನ್ನು ರಂಜಿಸುತ್ತಿದೆ.


ಶಿವಕುಮಾರ್, ಅಕ್ಷತಾ ಶ್ರೀಧರ್ ಮತ್ತು ಅರ್ಚನಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವನ್ನು ಮಿಥುನಾ ಎಂಟರ್‌ಟೈನ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸೈನ್ಸ್ ಸ್ಟುಡಿಯೋಸ್ನಡಿ ಎಂ.ಎಂ. ಅರ್ಜುನ್ ಮತ್ತು ಕಮಲ್ ಮೇಡಗೋಣಿ ನಿರ್ಮಿಸುತ್ತಿದ್ದಾರೆ.

ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಗಹಂದರದವುಳ್ಳ ಚಿತ್ರ, ಏಕಕಾಲದಲ್ಲಿ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲನಲ್ಲಿ ಸದ್ಯದಲ್ಲೇ ಬಿಡುಗಡೆಯಾಗುತ್ತಿದೆ.
ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕರಾದ ಎಂ.ಎಂ.ಅರ್ಜುನ್ ಮತ್ತು ಕಮಲ್ ಮೇಡಗೋಣಿ, ‘ನಿರ್ದೇಶಕ ಸತೀಶ್ ಅವರ ನಿರೂಪಣೆ ನಮಗೆ ಇಷ್ಟವಾಯಿತು. ಚಿತ್ರವನ್ನು ಬಹಳ ಚೆನ್ನಾಗಿ ರೂಪಿಸಿದ್ದಾರೆ ಅವರು.

ನಿರ್ಮಾಪಕನಾಗಿ ನಾನು ನನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ ಎಂಬ ನಂಬಿಕೆ ಇದೆ. ಇದೊಂದು ಯೂನಿವರ್ಸಲ್ ಕಥೆಯಾದ್ದರಿಂದ ಪ್ಯಾನ್-ಇಂಡಿಯಾ ಚಿತ್ರವನ್ನಾಗಿ ಬಿಡುಗಡೆ ಮಾಡುತ್ತಿದ್ದೇವೆ. ಇದು ಚಿತ್ರದ ಎರಡನೇ ಹಾಡಾಗಿದ್ದು, ಇದಕ್ಕೂ ಮುನ್ನ ‘ನಿನ್ನ ನೋಡಿದ …’ ಎಂಬ ಹಾಡು ಬಿಡುಗಡೆಯಾಗಿದೆ. ಶೀಘ್ರದಲ್ಲೇ ನಮ್ಮ ಸಿನಿಮಾದ ಬಿಡುಗಡೆ ದಿನಾಂಕವನ್ನು ಪ್ರಕಟಿಸುತ್ತೇವೆ’ ಎನ್ನುತ್ತಾರೆ.
ಇದೊಂದು ವಿಭಿನ್ನ ಲವ್ ಎಂಟರ್‌ಟೈನರ್ ಎನ್ನುವ ನಿರ್ದೇಶಕ ಸತೀಶ್ ಬತ್ತುಲ, ‘ಇದೊಂದು ವಿಭಿನ್ನ ಕಥೆ ಇರುವ ಚಿತ್ರ. ನಿರ್ಮಾಪಕರ ಬೆಂಬಲವು ನಮ್ಮನ್ನು ಇಲ್ಲಿಯವರೆಗೆ ಕರೆದೊಯ್ದಿದೆ.

ಈ ಪ್ಯಾನ್ ಇಂಡಿಯಾ ಚಿತ್ರವನ್ನು ಎಲ್ಲೂ ರಾಜಿ ಮಾಡಿಕೊಳ್ಳದೆ ನಿರ್ಮಿಸಲಾಗಿದೆ. ನಮ್ಮ ಸಿನಿಮಾದಲ್ಲಿ ಅನುಭವಿ ತಂತ್ರಜ್ಞರು ಕೆಲಸ ಮಾಡಿದ್ದು, ಸಂಗೀತ, ಹಿನ್ನೆಲೆ ಸಂಗೀತ ಮತ್ತು ಛಾಯಾಗ್ರಹಣ ಅದ್ಭುವಾಗಿ ಮೂಡಿಬಂದಿದೆ’ ಎನ್ನುತ್ತಾರೆ.
ಶಿವಕುಮಾರ್, ಹುಮೇ ಚಂದ್, ಅಕ್ಷತಾ ಶ್ರೀಧರ್, ಅರ್ಚನಾ, ಮಾಧವಿ ಲತಾ ಮುಂತಾದವರು ನಟಿಸಿದ್ದಾರೆ.

RELATED ARTICLES

Most Popular

Share via
Copy link
Powered by Social Snap