HomeExclusive Newsಬಂಡೆ ಮಾಕಾಳಮ್ಮ ಸನ್ನಿಧಿಯಲ್ಲಿ ಚಾಲನೆ ಕಂಡಿತು ಧರ್ಮ ಕೀರ್ತಿರಾಜ್ ಅವರ ಹೊಸ ಸಿನಿಮಾಸಸ್ಪೆನ್ಸ್ ಥ್ರಿಲ್ಲರ್ ರೀತಿಯ...

ಬಂಡೆ ಮಾಕಾಳಮ್ಮ ಸನ್ನಿಧಿಯಲ್ಲಿ ಚಾಲನೆ ಕಂಡಿತು ಧರ್ಮ ಕೀರ್ತಿರಾಜ್ ಅವರ ಹೊಸ ಸಿನಿಮಾ
ಸಸ್ಪೆನ್ಸ್ ಥ್ರಿಲ್ಲರ್ ರೀತಿಯ ಕಥಾಹಂದರ ಹೊಂದಿರುವ ಅಮರಾವತಿ ಪೊಲೀಸ್ ಸ್ಟೇಷನ್ ಚಿತ್ರೀಕರಣ ಅಕ್ಟೋಬರ್ 9ರಿಂದ ಆರಂಭ

ಎಸ್.ಎ.ಆರ್. ಪ್ರೊಡಕ್ಷನ್ಸ್ ಲಾಛನದಲ್ಲಿ ಅಂಜನರೆಡ್ಡಿ ಹಾಗೂ ಶ್ರೀಮತಿ ಗೀತಾ ಅಂಜನರೆಡ್ಡಿ ಅವರು ನಿರ್ಮಿಸುತ್ತಿರುವ, ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ “ಅಮರಾವತಿ ಪೊಲೀಸ್ ಸ್ಟೇಷನ್” ಚಲನಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ‌ ಶ್ರೀ ಬಂಡೆ ಮಹಾಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮುಹೂರ್ತ ದೃಶ್ಯಕ್ಕೆ ಡಾ ವಿ.ನಾಗೇಂದ್ರ ಪ್ರಸಾದ್ ಅವರು ಕ್ಲಾಪ್ ಮಾಡಿದರೆ, ನಿರ್ಮಾಪಕರಾದ ಅಂಜನ ರೆಡ್ಡಿ ಹಾಗೂ ಗೀತಾ ಅಂಜನರೆಡ್ಡಿ ಕ್ಯಾಮೆರಾ ಚಾಲನೆ ಮಾಡಿದರು.


ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡುವಾಗ ದಲ್ಲಾಳಿಗಳಿಂದ ಎದುರಿಸುತ್ತಿರುವ ಸಮಸ್ಯೆಗಳಿಗೆ ಊರಗೌಡ ಪರಿಹಾರ ಹುಡುಕುತ್ತಾನೆ. ಆತ ಇದ್ದಕ್ಕಿದ್ದ ಹಾಗೆ ಕಾಣೆಯಾದಾಗ ಆತನನ್ನು ಪತ್ತೆಹಚ್ಚಲು ಬಂದ ಪೋಲೀಸ್ ಅಧಿಕಾರಿ ಕೂಡ ಕಣ್ಮರೆಯಾಗುತ್ತಾನೆ. ಇದಕ್ಕೆಲ್ಲ ಪರಿಹಾರ ಕಂಡುಹಿಡಿಯುವುದೇ ಸ್ನೇಹಿತನನ್ನು ಹುಡುಕಿಕೊಂಡು ಹಳ್ಳಿಗೆ ಬರುವ ನಾಯಕ ಹೇಗೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತಾನೆ ಎಂಬುದನ್ನು ಸಸ್ಪೆನ್ಸ್, ಥ್ರಿಲ್ಲರ್ ಕಥೆಯೊಂದಿಗೆ ಹೇಳುವ ಪ್ರಯತ್ನವಿದು. ಈಗಾಗಲೇ ಡಬಲ್ ಬೋರ್ಡ್ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಪುನೀತ್ ಅರಸೀಕೆರೆ ಅವರ ಎರಡನೇ ಚಿತ್ರವಿದು.
ಅ. ೯ರಿಂದ ಆರಂಭಿಸಿ ಅರಸೀಕೆರೆಯ ಪೋಲಿಸ್ ಸ್ಟೇಷನ್, ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲಹಂತರ ಶೂಟಿಂಗ್ ಮುಗಿಸಿ, ನಂತರ ಬೆಂಗಳೂರಿನಲ್ಲಿ ಅಮರಾವತಿ ಪೋಲಿಸ್ ಸ್ಟೇಷನ್ ಚಿತ್ರದ ಚಿತ್ರೀಕರಣ ಮುಂದುವರೆಸಲಾಗುವುದು. ಒಟ್ಟು ೪೫ ರಿಂದ ೫೦ ದಿನಗಳ ಕಾಲ ಶೂಟಿಂಗ್ ನಡೆಸುವ ಪ್ಲಾನ್ ಹಾಕಿಕೊಂಡಿರುವುದಾಗಿ ನಿರ್ದೇಶಕ‌ ಪುನೀತ್ ಅವರು ಹೇಳಿದರು.


ಧರ್ಮ ಕೀರ್ತಿರಾಜ್ ಈ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ವೇದ್ವಿಕ ನಾಯಕಿ ಪಾತ್ರ ಮಾಡುತ್ತಿದ್ದಾರೆ. ಹಿರಿಯನಟಿ ಭವ್ಯ, ಉಮಾಶ್ರೀ, ಸಾಧುಕೋಕಿಲ, ಚಿಕ್ಕಣ್ಣ, ನಾಗೇಂದ್ರ ಪ್ರಸಾದ್, ಧರ್ಮಣ್ಣ ಪ್ರಮುಖ ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ ೪ ಹಾಡುಗಳಿದ್ದು, ರೋಣದ ಬಕ್ಕೇಶ್ ಅವರ ಸಂಗೀತ, ವಿ.ರಮೇಶ್ ಬಾಬು ಅವರ ಛಾಯಾಗ್ರಹಣ, ಥ್ರಿಲ್ಲರ್ ಮಂಜು, ವಿಕ್ರಂ ಮೋರ್ ಅವರ ಸಾಹಸ ನಿರ್ದೇಶನ, ಕೆ.ಎಂ.ಪ್ರಕಾಶ್ ಅವರ ಸಂಕಲನ, ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ.

RELATED ARTICLES

Most Popular

Share via
Copy link
Powered by Social Snap