ಒಂದು ಧಾರಾವಾಹಿಯಲ್ಲಿ ಮಿಂಚಿದ ವಿಷ್ಣುವರ್ಧನ್ ಆಳಿಯ ಅನಿರುದ್ಧ್ ಅವರು ಮತ್ತೊಂದು ಹೊಸ ಕಥೆಯ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕಲಾ ಸಾಮ್ರಾಟ್ ಎಸ್.ನಾರಾಯಣ್ ರಚನೆ ಹಾಗೂ ನಿರ್ದೇಶನದ ‘ ಸೂರ್ಯವಂಶ ‘ ಧಾರಾವಾಹಿಯಲ್ಲಿ ಅನಿರುದ್ದ್ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ.
ಶೀಘ್ರದಲ್ಲಿ ಈ ಸೀರಿಯಲ್ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಈ ಬಗ್ಗೆ ಸ್ವತಃ ಮಾಹಿತಿಯನ್ನು ಅನಿರುದ್ದ್ ಅವರು ಹಂಚಿಕೊಂಡಿದ್ದಾರೆ.
ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್. ನಾರಾಯಣ್ ಸರ್ ರವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಾ ಇದ್ದೇನೆ. ಇದು ತಮ್ಮೆಲ್ಲರ ಹಾರೈಕೆ, ಆಶೀರ್ವಾದಗಳ ಫಲ. ತಮ್ಮ ಪ್ರೀತಿ, ಪ್ರೋತ್ಸಾಹ ನನ್ನ ಮೇಲೆ ಸದಾ ಇರುತ್ತೆ ಅನ್ನೋ ಭರವಸೆ ನನಗಿದೆ ಎಂದು ಬರೆದುಕೊಂಡಿದ್ದಾರೆ .

