ರಿಷಬ್ ಶೆಟ್ಟಿ ಅವರ ‘ಕಾಂತಾರ’ ಕನ್ನಡದ ಬಳಿಕ ಹಿಂದಿ – ತೆಲುಗಿನಲ್ಲಿ ಮ್ಯಾಜಿಕ್ ಮಾಡುತ್ತಿದೆ.
ಹೌಸ್ ಫುಲ್ ಪ್ರದರ್ಶನದೊಂದಿಗೆ ಚಿತ್ರ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಹಲವಾರು ಮಂದಿ ಚಿತ್ರವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇತ್ತೀಚೆಗೆ ಟಾಲಿವುಡ್ ಸ್ಟಾರ್ ಪ್ರಭಾಸ್ ಅವರು ಸಿನಿಮಾವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಒಂದು ಬಾರಿ ಮಾತ್ರವಲ್ಲದೆ ಎರಡನೇ ಸಲಿಯೂ ಚಿತ್ರವನ್ನು ನೋಡಿದ್ದರು. ಅನೇಕ ಸ್ಟಾರ್ ಗಳು ಚಿತ್ರದ ಬಗ್ಗೆ ಪಾಸಿಟಿವ್ ರೆಸ್ಪಾನ್ಸ್ ಕೊಡುತ್ತಿದ್ದಾರೆ.
ಇದೀಗ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರು ಚಿತ್ರವನ್ನು ನೋಡಿ, ‘ಕಾಂತಾರ’ ಚಿತ್ರ ತಂಡಕ್ಕೆ ಶುಭವನ್ನು ಕೋರಿದ್ದಾರೆ.
ಚಿತ್ರವನ್ನು ನೋಡಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ‘ಕಾಂತಾರ ಸಿನಿಮಾ ನೋಡಿದೆ. ಪೂರ್ತಿಯಾಗಿ ಈ ಚಿತ್ರ ನನಗೆ ಇಷ್ಟ ಆಯ್ತು. ಪ್ರತಿಯೊಬ್ಬ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು ಸೇರಿ ಇಡೀ ತಂಡಕ್ಕೆ ಅಭಿನಂದನೆಗಳು. ಈ ಅನುಭವ ನೀಡಿದ್ದಕ್ಕಾಗಿ ಧನ್ಯವಾದಗಳು. ರಿಷಬ್ ಶೆಟ್ಟಿ ನೀವು ಅಮೇಜಿಂಗ್. ಎಲ್ಲವೂ ಈ ಸಿನಿಮಾವನ್ನು ಚಿತ್ರಮಂದಿರದಲ್ಲೇ ನೋಡಿ’ ಎಂದು ಅನುಷ್ಕಾ ಶೆಟ್ಟಿ ಹೊಗಳಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ‘ಕಾಂತಾರ’ ಸಿನಿಮಾದಲ್ಲಿ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್, ಪ್ರಮೋದ್ ಶೆಟ್ಟಿ, ಸ್ವರಾಜ್ ಮೊದಲಾದವರು ನಟಿಸಿದ್ದಾರೆ.

