ದುಬೈ:
ಏಷ್ಯಾ ಕಪ್ ಟಿ20 ಟೂರ್ನಮೆಂಟ್ ಗೆ ಟೀಮ್ ಇಂಡಿಯಾ ತಂಡವನ್ನು ಆಯ್ಕೆ ಸಮಿತಿ ಪ್ರಕಟಿಸಿದೆ.
ಆಗಸ್ಟ್ 27 ರಿಂದ ಆರಂಭವಾಗಲಿರುವ ಟೂರ್ನಮೆಂಟ್ ಗೆ ಸ್ಟಾರ್ ಆಟಗಾರರು ಕಮ್ ಬ್ಯಾಕ್ ಮಾಡಿದ್ದಾರೆ. 15 ಜನರ ತಂಡವನ್ನು ಆಯ್ಕೆ ಮಾಡಿದೆ.


ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡವನ್ನು ಆಯ್ಕೆ ಮಾಡಲಾಗಿದೆ.
ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಪಘಾನಿಸ್ತಾನ, ಬಾಂಗ್ಲಾದೇಶ ಪ್ರಮುಖ ತಂಡಗಳಾಗಿವೆ. ಇದರೊಂದಿಗೆ ಕಾಲಿಫೈಯರ್ ತಂಡಗಳು ಕೂಡ ಇವೆ.
ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದು, ಜಸ್ಪ್ರೀತ್ ಬುಮ್ರಾ ಗಾಯದಿಂದ ಹೊರಗೆ ಉಳಿಯಲಿದ್ದಾರೆ.


ಟೀಮ್ ಇಂಡಿಯಾ :
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

