ತುಳುವಿನಲ್ಲಿ “ಮದಿಪು” ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಚೇತನ್ ಮುಂಡಾಡಿ ಈಗ ಮತ್ತೊಂದು ವಿಭಿನ್ನ ಕಥೆಯನ್ನಿಟ್ಟುಕೊಂಡು ಪ್ರೇಕ್ಷಕರ ಮುಂದೆ ಬರು ರೆಡಿಯಾಗಿದ್ದಾರೆ.


“ಭಾವಪೂರ್ಣ” ಎನ್ನುವ ಚಿತ್ರವನ್ನಿಟ್ಟುಕೊಂಡು ಚೇತನ್ ಮುಂಡಾಡಿ ಪ್ರೇಕ್ಷಕರ ಮನ ಗೆಲ್ಲಲು ಬರುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 8 ರಿಂದ ಆರಂಭವಾಗಲಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.


ಪತ್ರಿಕಾಗೋಷ್ಠಿ ಮಾತಾನಾಡಿದ ನಿರ್ದೇಶಕ ಚೇತನ್, ಈವರೆಗೂ ಕಲಾತ್ಮಕ ಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಇದು ಮೊದಲ ಕಮರ್ಷಿಯಲ್ ಚಿತ್ರ. ಇದು ತೊಂಭತ್ತರ ಕಾಲಘಟ್ಟದಲ್ಲಿ ನಡೆಯುವ ಕಥೆ. ಭಾವನೆಗಳೇ ಇಲ್ಲಿನ ಪಾತ್ರಗಳು. ಪುಟ್ಟಗ್ರಾಮವೊಂದರಲ್ಲಿ 50ರ ವಯಸ್ಸಿನ ವ್ಯಕ್ತಿಯಲ್ಲಿ ಚಿಗುರುವ ಅನಿವಾರ್ಯ ಬಯಕೆಯನ್ನು ಈಡೇರಿಸಿಕೊಳ್ಳಲು ಆತ ಪಡುವ ಪರಿಪಾಟಗಳೇ ಚಿತ್ರದ ಮುಖ್ಯ ಕಥಾಹಂದರ.
ಧರ್ಮಣ್ಣ ಎಂಬ ಮುಖ್ಯಪಾತ್ರದಲ್ಲಿ ಹಿರಿಯ ನಟ ರಮೇಶ್ ಪಂಡಿತ್ ಅಭಿನಯಿಸುತ್ತಿದ್ದಾರೆ. ಮಂಜುನಾಥ್ ಹೆಗಡೆ ಮತ್ತೊಂದು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೈಲಶ್ರೀ, ಮಂಗಳಾ, ನಾಗೇಂದ್ರ ಶಾ, ಅಥರ್ವ ಪ್ರಕಾಶ್, ವಿ.ಮನೋಹರ್, ಸುಜಯ್ ಶಾಸ್ತ್ರಿ, ಎಂ.ಕೆ.ಮಠ, ವಿನ್ಯಾ, ಉಗ್ರಂ ಮಂಜು, ಜೆಜಿ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಸೆಪ್ಟೆಂಬರ್ 8 ರಿಂದ ಸೌತಡ್ಕ, ಸಾಗರ, ಜೋಗ, ಮುರುಡೇಶ್ವರದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಚೇತನ್ ಮುಂಡಾಡಿ ಚಿತ್ರದ ಕುರಿತು ಮಾಹಿತಿ ನೀಡಿದರು.
ನಟ ರಮೇಶ್ ಪಂಡಿತ್ ಮಾತಾನಾಡಿ, ರಮೇಶ್ ಈ ಚಿತ್ರದಲ್ಲಿ ನಾನು ಧರ್ಮಣ್ಣ ಎನ್ನುವ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಅನ್ವೇಷಣೆಯ ಮೇಲೆ ಕಥೆ ಸಾಗುತ್ತದೆ ಎಂದು ಹೇಳಿದರು.
ಚಿತ್ರದ ನಿರ್ಮಾಪಕ ಪ್ರಶಾಂತ್ ಅಂಜನಪ್ಪ ಹಾಗೂ ಸಂಭಾಷಣೆ ಬರೆದಿರುವ ಸುಂದರ್ ವೀಣಾ ಸಿನಿಮಾದ ಬಗ್ಗೆ ಮಾತಾನಾಡಿದರು.
ವಿ.ಮನೋಹರ್ ಸಂಗೀತ ನಿರ್ದೇಶನ, ಪ್ರಸನ್ನ ಛಾಯಾಗ್ರಹಣ, ಕೀರ್ತಿ ಸಂಕಲನ ಮಾಡಿದ್ದಾರೆ.

