ನಟ ಪ್ರಮೋದ್ ನಾಯಕನಾಗಿ ನಟಿಸುತ್ತಿರುವ “ಬಾಂಡ್ ರವಿ” ಚಿತ್ರ ಚಿತ್ರೀಕರಣ ಮುಗಿಸಿ, ಡಬ್ಬಿಂಗ್ ಕೂಡ ಪೂರ್ಣಗೊಳಿಸಿದೆ.
ಮೊದಲ ಬಾರಿ ಆ್ಯಕ್ಷನ್ ಕಟ್ ಹೇಳುತ್ತಿರುಬ ಪ್ರಜ್ವಲ್ ಎಸ್.ಪಿ. ಮಾಸ್ ಕಥೆಗೆ ಲವ್ ಸ್ಟೋರಿ ಟಚ್ ಕೊಟ್ಟಿದ್ದಾರೆ.
ಸಿನಿಮಾದಲ್ಲಿ ಪ್ರಮೋದ್ ಪವರ್ ಸ್ಟಾರ್ ಅಪ್ಪು ಅವರ ಅಭಿಮಾನಿಯ ಲುಕ್ ನಲ್ಲಿ ಮಿಂಚಿದ್ದಾರೆ. ನಾಯಕಿಯಾಗಿ ಕಾಜಲ್ ಕಾಣಿಸಿಕೊಳ್ಳಲಿದ್ದಾರೆ.
ಈಗಾಗಲೇ ಚಿತ್ರೀಕರಣ ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ ಮಂಗಳೂರು ಭಾಗದಲ್ಲಿ ಸುಮಾರು 50 ದಿನಗಳ ಕಾಲ ನಡೆಸಿದೆ.


ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ಗೋವಿಂದೇಗೌಡ, ಪವನ್, ಮಿಮಿಕ್ರಿ ಗೋಪಿ, ಸಂತು, ಗುರುರಾಜ್ ಹೊಸಕೋಟೆ ಮುಖ್ಯ ಭೂಮಿಕೆಯಲ್ಲಿದ್ದಾರೆ.
ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್, ಚಿನ್ಮಯ್ ಭಾವಿಕೆರೆ ಮುಂತಾದವರು ಚಿತ್ರದ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

