ಅಕ್ಷಿತ್ ಶಶಿಕುಮಾರ್ – ಅದಿತಿ ಪ್ರಭುದೇವ ಅಭಿನಯದ ʼಖೆಯೊಸ್ʼ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಖ್ಯಾತ ನಟ ವಿಶಾಲ್ ಟೀಸರ್ ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭಕೋರಿದರು.
ವೈದ್ಯಕೀಯ ಕಾಲೇಜೊಂದರಲ್ಲಿ ನಡೆಯುವ ಕಥೆ. ನಾಯಕ ಅನಿರೀಕ್ಷಿತವಾಗಿ ಒಂದು ಸಮಸ್ಯೆಗೆ ಸಿಲುಕಿಕೊಳ್ಳುತ್ತಾನೆ. ಆತ ತನ್ನ ಜಾಣ್ಮೆಯಿಂದ ಹೇಗೆ ಆ ಸಮಸ್ಯೆಯಿಂದ ಪಾರಾಗುತ್ತಾನೆ ಎಂಬುದು ಈ ಸಿನಿಮಾದ ಕಥಾಹಂದರ.
ಎ2 ಮ್ಯೂಸಿಕ್ ನಲ್ಲಿ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ಫೆಬ್ರವರಿ 17 ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
THE BLACK PEBBLE ENTERTAINMENTS ಲಾಂಛನದಲ್ಲಿ ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ನಿರ್ಮಿಸಿದ್ದಾರೆ. ಜಿ.ವಿ.ಪ್ರಸಾದ್ ನಿರ್ದೇಶನ ಮಾಡಿದ್ದಾರೆ.





