HomeNewsಮೆಡಿಕಲ್ ಥ್ರಿಲ್ಲರ್ ' ಖೆಯೊಸ್' ರಿಲೀಸ್ ಗೆ ರೆಡಿ

ಮೆಡಿಕಲ್ ಥ್ರಿಲ್ಲರ್ ‘ ಖೆಯೊಸ್’ ರಿಲೀಸ್ ಗೆ ರೆಡಿ

ಡಾ.ಜಿ.ವಿ.ಪ್ರಸಾದ್ “ಖೆಯೊಸ್” ಚಿತ್ರದ ನಿರ್ದೇಶಕರು. ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ಚಿತ್ರದ ಬಗ್ಗೆ ಮಾತಾನಾಡಿ ಮಾಹಿತಿ ಕೊಟ್ಟ ನಿರ್ದೇಶಕ
ಜಿ.ವಿ.ಪ್ರಸಾದ್,ಇದೊಂದು ಮೆಡಿಕಲ್ ಕಾಲೇಜಿನಲ್ಲಿ ನಡೆಯುವ ಕಥೆ. ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಜೊತೆಗೆ ಮರ್ಡರ್ ಮಿಸ್ಟರಿ ಜಾನರ್ ಎನ್ನಬಹುದು. ಮನಸ್ಸಿನಲ್ಲಾಗುವ ಗೊಂದಲ, ಅಸ್ತವ್ಯಸ್ತ ಇವುಗಳಿಗೆ “ಖೆಯೊಸ್” ಎನ್ನುತ್ತಾರೆ. ಫೆಬ್ರವರಿ 17 ಚಿತ್ರ ತೆರೆಗೆ ಬರಲಿದೆ. ಜನವರಿ 26 ರಂದು “ಖೆಯೊಸ್” ಚಿತ್ರದ ತುಣುಕು ಬಿಡುಗಡೆಯಾಗಲಿದೆ. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎನ್ನುತ್ತಾರೆ ನಿರ್ದೇಶಕರು.

ವಿ.ನಾಗೇಂದ್ರ ಪ್ರಸಾದ್ ಹಾಗೂ ಜಿ.ವಿ.ಪ್ರಸಾದ್ ಬರೆದಿರುವ ಮೂರು ಹಾಡುಗಳು ಚಿತ್ರದಲ್ಲಿದ್ದು, ವಿಜಯ್ ಹರಿತ್ಸ ಸಂಗೀತ ನೀಡಿದ್ದಾರೆ. ದಿಲೀಪ್ ಕುಮಾರ್, ಸಂದೀಪ್ ವಳ್ಳೂರಿ ಛಾಯಾಗ್ರಹಣ ಹಾಗೂ ಮಧು ತುಂಬಿಕೆರೆ, ವೆಂಕಿ ಯುಡಿವಿ ಸಂಕಲನವಿರುವ “ಖೆಯೊಸ್” ಚಿತ್ರಕ್ಕೆ ಚೇತನ್ ಡಿಸೋಜ , ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿದೆ.

ಅಕ್ಷಿತ್ ಶಶಿಕುಮಾರ್ – ಅದಿತಿ ಪ್ರಭುದೇವ ಅಭಿನಯದ ‘ಖೆಯೊಸ್’ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.

ಈ ಚಿತ್ರವನ್ನು THE BLACK PEBBLE ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ನಿರ್ಮಿಸುತ್ತಿದ್ದಾರೆ.

ಸುಪ್ರೀಂ ಹೀರೋ ಶಶಿಕುಮಾರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದು, ತಂದೆ – ಮಗ ಇಬ್ಬರೂ ಒಟ್ಟಿಗೆ ಅಭಿನಯಿಸಿರುವ ಮೊದಲ ಚಿತ್ರವಿದು. ಆರ್ ಕೆ ಚಂದನ್, ಸಿದ್ದು ಮೂಲಿಮನಿ ಮೊದಲಾದವರು ತಾರಾಬಳಗದಲ್ಲಿದ್ದಾರೆ.

RELATED ARTICLES

Most Popular

Share via
Copy link
Powered by Social Snap