ನಟ ಶರಣ್ ಮತ್ತೆ ಕಾಮಿಡಿ ಪಾತ್ರಗಳತ್ತ ಮುಖ ಮಾಡಿದ್ದಾರೆ. “ಛೂ ಮಂತರ್” ಚಿತ್ರದ ನಾಯಕರಾಗಿ ಕಮಾಲ್ ಮಾಡಲು ರೆಡಿಯಾಗಿದ್ದಾರೆ.
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ.
“ಕರ್ವ” ಚಿತ್ರದ ಮೂಲಕ ಕನ್ನಡಿಗರ ಮನಗೆದ್ದಿರುವ ನವನೀತ್, ಕಥೆ, ಚಿತ್ರಕಥೆ ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಹಾರಾರ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಿದ್ದವಾಗುತ್ತಿದೆ. ಬೆಂಗಳೂರು, ಮೈಸೂರು, ಉತ್ತರಕಾಂಡ ಹಾಗೂ ಲಂಡನ್ ನಲ್ಲಿ ಚಿತ್ರೀಕರಣ ನಡೆದಿದೆ.
ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.
ಅನೂಪ್ ಕಟ್ಟುಕರನ್ ಮೊದಲ ಬಾರಿಗೆ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ. ವೆಂಕಿ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್(ಕೆ.ಜಿ.ಎಫ್ ಖ್ಯಾತಿ) ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ “ಛೂ ಮಂತರ್” ಚಿತ್ರಕ್ಕಿದೆ.





