‘ಕ್ರಾಂತಿ’ ಸಿನಿಮಾದ ‘ಬೊಂಬೆ ಬೊಂಬೆ’ ಹಾಡು ಬಿಡುಗಡೆ ವೇಳೆ ನಟ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಹೊಸಪೇಟೆಯ ವಾಲ್ಮೀಕಿ ವೃತ್ತದಲ್ಲಿ ಚಿತ್ರ ತಂಡ ಸಿನಿಮಾದ ಹಾಡು ರಿಲೀಸ್ ಮಾಡುತ್ತಿತ್ತು. ಇದೇ ವೇಳೆ ಕೆಲವರು ದರ್ಶನ್ ಅವರ ಬ್ಯಾನರ್ ಗೆ ಹಾನಿ ಮಾಡಿ, ಗಲಭೆ ಎಬ್ಬಿಸಲು ಶುರು ಮಾಡಿದ್ದಾರೆ. ಇಷ್ಟು ಮಾತ್ರವಲ್ಲದೆ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದಿದ್ದಾರೆ.
ಇದು ಪರಿಸ್ಥಿತಿ ಮತ್ತಷ್ಟು ಬಿಗಾಡಿಸುವಂತಾಯಿತು. ಕಲ್ಲು ತೂರಾಟ ಮಾಡಿದ ಕಿಡಿಗೇಡಿಗಳಿಗೆ ಪೊಲೀಸರು ಲಾಟಿ ಪ್ರಹಾರ ನಡೆಸಿ ನಿಯಂತ್ರಿಸಿದರು.
ಈ ಕೃತ್ಯ ಎಸಗಿದವರ ವಿರುದ್ಧ ಸಿಟ್ಟು ಭುಗಿಲೆದ್ದಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಫ್ಯಾನ್ಸ್ ಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಟ ಧ್ವನೀರ್ ಈ ಬಗ್ಗೆ ಸ್ಟೋರಿಯಲ್ಲಿ ಬರೆದುಕೊಂಡಿದ್ದು, “ನಿನ್ನೆ ಹೊಸಪೇಟೆಯಲ್ಲಿ ನಡೆದ ಘಟನೆ ತುಂಬಾ ನೋವುಂಟು ಮಾಡಿದೆ. ನಿಮ್ಮ ಮೇಲೆ ನಡೆದಿರುವ ಪಿತೂರಿ ಖಂಡನೀಯ. ನಿಮ್ಮ ಸಹಸ್ರ ಅಭಿಮಾನಿಗಳಲ್ಲಿ ಒಬ್ಬನಾಗಿ ಸಾಯೋವರೆಗೂ ನಿಮ್ಮ ಮೇಲಿನ ಅಭಿಮಾನ ದುಪ್ಪಟ್ಟಾಗುತ್ತೋ ಹೊರತು ಕಡಿಮೆಯಾಗುವುದಿಲ್ಲ. ಈ ಘಟನೆಗೆ ಕಾರಣರಾದವರಿಗೆ ಭಗವಂತ ಒಳ್ಳೆಯದೇ ಮಾಡಲಿ. ಕೆಟ್ಟದು ಬಯಸಿದವರಿಗೂ ಒಳ್ಳೆದು ಮಾಡಿ ಎಂದು ಹೇಳಿಕೊಟ್ಟಿದ್ದಿರಾ ಬಾಸ್. ಕರ್ಮ ಎನ್ನುವುದು ಯಾರಿಗೂ ಬಿಟ್ಟಿರುವುದಿಲ್ಲ, ಕರ್ಮ ತಿರುಗುತ್ತೆ. ಚಪ್ಪಲಿ ಎಸೆದ ವ್ಯಕ್ತಿಗೂ, ಅವನ ಮನಸ್ಥಿತಿಗೂ ಮತ್ತು ಪ್ರಚೋದಿಸಿದರವರಿಗೂ ನೆಮ್ಮದಿ ಸಿಗಲಿ. ನಿಮ್ಮ ಸೆಲೆಬ್ರಿಟಿ ಅಭಿಮಾನಿಗಳ ಮುಂದೆ ಈ ಘಟನೆಗಳು ಸಾಸಿವೆ ಕಾಳಿಗೆ ಸಮ. ನಿಮ್ಮ ಮೇಲಿನ ಅಭಿಮಾನದೊಂದಿಗೆ.. ಧನ್ವೀರ್, ನಿಮ್ಮೊಂದಿಗೆ ಸದಾ ನಾವು” ಎಂದು ಬರೆದುಕೊಂಡಿದ್ದಾರೆ.

