ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಬಹು ನಿರೀಕ್ಷಿತ ‘ಧೂಮಂ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬಹುಭಾಷಾ ನಟ ಫಹಾದ್ ಫಾಸಿಲ್ ಹಾಗೂ ಅಪರ್ಣ ಬಾಲಮುರಳಿ ಜೋಡಿಯಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಮಲಯಾಳಂ, ಕನ್ನಡ, ತಮಿಳು ಮತ್ತು ತೆಲುಗು 4 ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
ಈಗಾಗಲೇ ಮಲಯಾಳಂನಲ್ಲಿ ಖ್ಯಾತ ನಟ ಪೃಥ್ವಿರಾಜ್ ಸುಕುಮಾರ್ ಅವರನ್ನು ನಾಯಕನಾಗಿ ಮಾಡಿಕೊಂಡು ‘ಟೈಸನ್’ ಎಂಬ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಈಗ ‘ಧೂಮಂ’ ಮೂಲಕ ಮತ್ತಷ್ಟು ಹೈಪ್ ಕ್ರಿಯೇಟ್ ಮಾಡಿದೆ.
ಸಿನಿಮಾದ ಚಿತ್ರೀಕರಣ ಮುಗಿಸಿ ಚಿತ್ರತಂಡ ಫೋಟೋ ಹಂಚಿಕೊಂಡಿದೆ.
‘ಯು ಟರ್ನ್ , ‘ಲೂಸಿಯಾ’, ನಂತಹ ಹಿಟ್ ಸಿನಿಮಾಗಳನ್ನು ನೀಡಿರುವ ಪವನ್ ಇತ್ತೀಚೆಗೆ ಗಾಳಿಪಟ -2 ಸಿನಿಮಾದಲ್ಲೂ ನಟಿಸಿ ಮಿಂಚಿದ್ದರು.



