ಡಾರ್ಲಿಂಗ್ ಕೃಷ್ಣ ಅಭಿನಯದ ‘ಲಕ್ಕಿಮ್ಯಾನ್’ ಚಿತ್ರ ಥಿಯೇಟರ್ ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಅವರ ಮತ್ತೊಂದು ಬಹು ನಿರೀಕ್ಷಿತ ಚಿತ್ರದ ರಿಲೀಸ್ ಡೇಟ್ ರಿವೀಲ್ ಆಗಿದೆ.


ಶಿವತೇಜಸ್ ನಿರ್ದೇಶಿಸುತ್ತಿರುಬ ‘ದಿಲ್ ಪಸಂದ್’ ಚಿತ್ರ ನವೆಂಬರ್ 11 ರಂದು ರಿಲೀಸ್ ಆಗಲಿದೆ ಎಂದು ಚಿತ್ರ ತಂಡ ಇತ್ತೀಚಿಗೆ ಅನೌನ್ಸ್ ಮಾಡಿದೆ.
ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸುತ್ತಿದ್ದಾರೆ.
ಇದೊಂದು ಲವ್ ಸ್ಟೋರಿ ಕಥೆಯಾಗಿದ್ದು, ಕೌಟುಂಬಿಕ ಕಥೆಯ ಹಿನ್ನೆಲೆಯಲ್ಲಿ ಚಿತ್ರ ಸಾಗುತ್ತದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರ ತಂಡ ಬೆಂಗಳೂರಿನಲ್ಲಿ ಹೆಚ್ಚಿನ ಶೂಟಿಂಗ್ ಮಾಡಿದೆ.
ಡಾರ್ಲಿಂಗ್ ಕೃಷ್ಣ ಅವರೊಂದಿಗೆ ಸ್ಯಾಂಡಲ್ ವುಡ್ ನ ಬ್ಯುಸಿ ನಟಿಯರಲ್ಲಿ ಒಬ್ಬರಾಗಿರುವ ನಿಶ್ವಿಕಾ ನಾಯ್ಡು ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರದ ಹಾಡುಗಳಿಗೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಮ್ಯೂಸಿಕ್ ನೀಡಿದ್ದಾರೆ.
ಮೇಘ ಶೆಟ್ಟಿ, ಸಾಧು ಕೋಕಿಲ, ರಂಗಾಯಣ ರಘು, ತಬಲ ನಾಣಿ, ಗಿರಿ, ಅರುಣಾ ಬಾಲರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಈ ತಿಂಗಳ ಕೊನೆಗೆ ಚಿತ್ರದ ಟೀಸರ್ ರಿಲೀಸ್ ಆಗುವ ಸಾಧ್ಯತೆಯಿದೆ



