ಶ್ರಿನಿ ನಿರ್ದೇಶನದಲ್ಲಿ ಬರುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ‘ಘೋಸ್ಟ್’ ಸಟ್ಟೇರಿದೆ.
ಮಿನರ್ವ ಮಿಲ್ ನಲ್ಲಿ ಸಂದೇಶ್ ನಾಗರಾಜ್ ಪ್ರೊಡಕ್ಷನ್ ನಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡುತ್ತಿರುವ ಸಿನಿಮಾದ ಮುಹೂರ್ತ ಗಣ್ಯರ ಸಮ್ಮುಖದಲ್ಲಿ ನೆರವೇರಿತು.
ಚಿತ್ರದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿದರು. ಬೃಂದಾ ಜಯರಾಂ ಕ್ಯಾಮೆರಾಕ್ಕೆ ಚಾಲನೆ ಮಾಡಿದರು.
ಈ ಸಿನಿಮಾಕ್ಕಾಗಿ ಎಚ್ ಎಂ ಟಿ ಫ್ಯಾಕ್ಟರಿಯಲ್ಲಿ ಚಿತ್ರದ ದೊಡ್ಡ ಸೆಟ್ ಇರಲಿದ್ದು, ಮೈಸೂರಿನಲ್ಲಿ ಹೆಚ್ಚಿನ ಚಿತ್ರೀಕರಣ ಆಗಲಿದೆ. ’ಘೋಸ್ಟ್’ ಒಂದು ಥ್ರಿಲ್ಲರ್ ಕಥಾ ಹಂದರವನ್ನು ಒಳಗೊಂಡಿರುವ ಸಿನಿಮಾ.


ಕಲಾ ನಿರ್ದೇಶಕ ಮೋಹನ್ ಬಿ ಕೆರೆ ಅದ್ಧೂರಿ ಸೆಟ್ ನಿರ್ಮಾಣ ಮಾಡಿದ್ದಾರೆ.
ಮಿನರ್ವ ಮಿಲ್ ನಲ್ಲಿ ನಿರ್ಮಿಸಲಾಗಿರುವ ಜೈಲ್ ಸೆಟ್ ನಲ್ಲೇ 24 ದಿನಗಳ ಚಿತ್ರೀಕರಣ ನಡೆಯಲಿದೆ. ಈ ಅದ್ದೂರಿ ಸೆಟ್ ಗಳ ನಿರ್ಮಾಣಕ್ಕೆ ಸುಮಾರು ಮೂರು ಕೋಟಿ ವೆಚ್ಚವಾಗಿದೆ ಎಂದು ಚಿತ್ರ ತಂಡ ಹೇಳಿದೆ.
ಚಿತ್ರಕ್ಕೆ ಅರ್ಜುನ್ ಜನ್ಯ ಮ್ಯೂಸಿಕ್ ನೀಡಲಿದ್ದು, ಟಾಲಿವುಡ್ ನ ಮಹೇಂದ್ರ ಸಿಂಹ ಛಾಯಾಗ್ರಹಣವನ್ನು ಮಾಡಲಿದ್ದಾರೆ.
ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಬರೆದಿದ್ದಾರೆ.
ಶಿವರಾಜಕುಮಾರ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.



