ಶ್ರೀನಿ ನಿರ್ದೇಶನದ ‘ಘೋಸ್ಟ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ.
ಅದ್ದೂರಿ ವೆಚ್ಚದಲ್ಲಿ ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ನಿರ್ಮಿಸಲಾದ ಸೆಟ್ ನಲ್ಲಿ 28 ದಿನಗಳ ಕಾಲ ಚಿತ್ರೀಕರಣಗೊಂಡಿದೆ.
ಶಿವರಾಜ್ ಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.


ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.
ನಿರ್ದೇಶಕ ಶ್ರೀನಿ ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.
ಸಿನಿಮಾದ ಸಂಭಾಷಣೆಯನ್ನು
ಮಾಸ್ತಿ ಹಾಗೂ ಪ್ರಸನ್ನ ಅವರು ಬರೆದಿದ್ದಾರೆ
ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್ ” ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.
ಶಿವರಾಜ್ ಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.



