ಆರ್.ಚಂದ್ರ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ʼಕಬ್ಜʼ ದಿನ ಕಳೆದಂತೆ ನಿರೀಕ್ಷೆಉನ್ನು ಹೆಚ್ಚಿಸುತ್ತಿದೆ. ರಿಯಲ್ ಸ್ಟಾರ್ ಉಪ್ಪಿ ಹಾಗೂ ಕಿಚ್ಚ ಸುದೀಪ್ ಸವರು ಒಟ್ಟಾಗಿ ಒಂದೇ ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾವನ್ನು ನೋಡಲು ಅಪಾರ ಪ್ರೇಕ್ಷಕರು ಕಾಯುತ್ತಿದ್ದಾರೆ.
ಸಿನಿಮಾದ ಟೀಸರ್ ರಿಲೀಸ್ ಬಗ್ಗೆ ಗುಸು ಗುಸು ಮಾತುಗಳು ಕೇಳಿ ಬರುತ್ತಿತ್ತು. ಆದರೀಗ ಅದಕ್ಕೆ ಸ್ಪಷ್ಟನೆ ಸಿಕ್ಕಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗುವುದು ಅಧಿಕೃತವಾಗಿದೆ.


ಉಪೇಂದ್ರ ಅವರ ಹುಟ್ಟುಹಬ್ಬದ ಒಂದು ದಿನ ಮೊದಲು ಟೀಸರ್ ರಿಲೀಸ್ ಆಗಲಿದೆ.
ಬಿಗ್ ಬಜೆಟ್ ನಲ್ಲಿ ಮೂಡಿ ಬಂದಿರುವ ʼಕಬ್ಜʼ ಚಿತ್ರೀಕರಣವನ್ನು ಮುಗಿಸಿದೆ. ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟದ ನಿರೀಕ್ಷೆಯಿದೆ. ಶೀಘ್ರದಲ್ಲಿ ರಿಲೀಸ್ ಡೇಟ್ ಅನೌನ್ಸ್ ಆಗಲಿದೆ ಎಂದು ನಿರ್ದೇಶಕರು ಹೇಳಿದ್ದಾರೆ.

