HomeNewsಅಪ್ಪು ಹುಟ್ಟು ಹಬ್ಬಕ್ಕೆ 'ಕಬ್ಜ' ವಿಶ್ವದಾದ್ಯಂತ ದರ್ಶನ

ಅಪ್ಪು ಹುಟ್ಟು ಹಬ್ಬಕ್ಕೆ ‘ಕಬ್ಜ’ ವಿಶ್ವದಾದ್ಯಂತ ದರ್ಶನ

ಪ್ಯಾನ್ ಇಂಡಿಯಾ ‘ಕಬ್ಜ’ ರಿಲೀಸ್ ಡೇಟ್ ಹೊರ ಬಿದ್ದಿದೆ. ಟೀಸರ್ ಮೂಲಕ ದೊಡ್ಡದಾಗಿ ಸೌಂಡ್ ಮಾಡಿದ ಆರ್.ಚಂದ್ರು ಸಿನಿಮಾವನ್ನು ‘ಕರುನಾಡ ರಾಜಕುಮಾರ’, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲು ನಿರ್ಧರಿಸಿದೆ.

ಕರ್ನಾಟಕ ಮಾತ್ರವಲ್ಲದೆ, ಇಡೀ ಭಾರತಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕನ್ನಡಿಗರ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”, 2023 ರ ಮಾರ್ಚ್ 17 ಅಂದರೆ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು
ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ತಿಳಿಸಿದೆ‌.

ಒಂದು ಕಡೆ ಮಾರ್ಚ್ 17 ರಂದು ಅಪ್ಪು ಹುಟ್ಟು ಹಬ್ಬವಾದರೆ ಇನ್ನೊಂದೆಡೆ ಯುಗಾದಿ ಹಬ್ಬವೂ ಸಮೀಪವಾಗಿರಿವುದರಿಂದ ಅಭಿಮಾನಿಗಳಿಗೆ ಮನರಂಜನೆ ಹಬ್ಬದೂಟ ಸಿಕ್ಕಿವುದು ಖಚಿತ.



ಇಂಡಿಯನ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ಹಾಗೂ ಆರ್ ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ನೀಡುತ್ತಿದ್ದ ಪ್ರೋತ್ಸಾಹ ಅಪಾರ. ಚಿತ್ರದ ಕೆಲವು ತುಣುಕುಗಳನ್ನು ಅವರಿಗೆ ತೋರಿಸಿದ್ದಾಗ ಹಾಲಿವುಡ್ ಚಿತ್ರ ಇದ್ದ ಹಾಗೆ ಇದೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದರು. ಸಹೃದಯಿ, ಅಭಿಮಾನಿಗಳ ಪಾಲಿಗಂತೂ ದೇವರೆ ಆಗಿರುವ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ನಮ್ಮ “ಕಬ್ಬ” ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಹೊಸವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಮೀಪದಲ್ಲೇ ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ತಿಳಿಸಿದೆ‌.


ಈಗಾಗಲೇ ಫಸ್ಟ್ ಲುಕ್, ಟೀಸರ್ ಮೂಲಕ ಅಭಿಮಾನಿಗಳ ಮನ ಗೆದ್ದಿರುವ “ಕಬ್ಜ” ಚಿತ್ರ ಅತೀ ದೊಡ್ಡ ಯಶಸ್ಸು ಕಾಣಲಿ ಎಂಬುದೇ ಪ್ರತಿಯೊಬ್ಬ ಕನ್ನಡಾಭಿಮಾನಿಯ ಹಾರೈಕೆ.

RELATED ARTICLES

Most Popular

Share via
Copy link
Powered by Social Snap