ಇತ್ತೀಚೆಗೆ ಸೂಪರ್ ಸ್ಟಾರ್ ರಜನಿಕಾಂತ್ ʼಕಾಂತಾರʼವನ್ನು ಶ್ಲಾಘಿಸಿದ್ದರು. “ತಿಳಿದಿರುವುದಕ್ಕಿಂತ ತಿಳಿಯದಿರುವುದೇ ಹೆಚ್ಚು. ಇದನ್ನು ಸಿನಿಮಾದಲ್ಲಿ ಹೊಂಬಾಳೆ ಫಿಲ್ಮ್ಸ್ ಗಿಂತ ಉತ್ತಮವಾಗಿ ಬೇರೆ ಯಾರೂ ಹೇಳಲು ಸಾಧ್ಯವಿಲ್ಲ. ನೀವು ಕಾಂತಾರ ಚಿತ್ರದ ಮೂಲಕ ನನಗೆ ಗೂಸ್ ಬಂಪ್ಸ್ ಕೊಟ್ಟಿದ್ದೀರಿ. ಒಬ್ಬ ಬರಹಗಾರ, ನಿರ್ದೇಶಕ ಮತ್ತು ನಟನಾಗಿ ರಿಷಬ್ ಶೆಟ್ಟಿ ನಿಮಗೆ ಹ್ಯಾಟ್ಸ್ ಆಫ್” ಎಂದು ಪ್ರಶಂಸಿದ್ದರು.
ಇದಕ್ಕೆ ನಿರ್ಮಾಪಕ ವಿಜಯ್ ಕಿರಂಗದೂರು, ರಿಷಬ್ ಶೆಟ್ಟಿ ಹಾಗೂ ಸಪ್ತ ಗೌಡ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿದ್ದರು.
ಈಗ ನಿರ್ದೇಶಕ ರಿಷಬ್ ಶೆಟ್ಟಿ ರಜನಿಕಾಂತ್ ಅವರನ್ನು ಭೇಟಿ ಮಾಡಿದ್ದಾರೆ. “ನೀವು ಒಂದ್ ಸಲ ಹೊಗಳಿದರೆ ನೂರು ಸಲ ಹೊಗಳ್ದ೦ಗೆ ನಮಗೆ. ಧನ್ಯವಾದಗಳು ರಜಿನಿಕಾಂತ್ ಸರ್, ನಮ್ಮ ಕಾಂತಾರ ಚಿತ್ರ ನೋಡಿ ನೀವು ಮೆಚ್ಚಿದ್ದಕ್ಕೆ ನಾವು ಸದಾ ಆಭಾರಿ’ ಎಂದು ರಿಷಬ್ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಹೊಂಬಾಳೆ ಫಿಲಂಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಿಸಿದ್ದರು. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದ ಚಿತ್ರದಲ್ಲಿ, ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

