ಕಾಂತಾರ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ‘ವರಾಹ ರೂಪಂ’ ಹಾಡನ್ನು ನಕಲಿ ಮಾಡಲಾಗಿದೆ ಎಂದು ಕೇರಳದ ತೈಕ್ಕುಡಂ ಬ್ರಿಡ್ಜ್ ಮ್ಯೂಸಿಕ್ ಬ್ಯಾಂಡ್‌ನವರು ಕಾಂತಾರ ಸಿನಿಮಾದ `ವರಾಹ ರೂಪಂ’ ಹಾಡಿನ ವಿವಾದವನ್ನು ಕೋರ್ಟಿಗೆ ತೆಗೆದುಕೊಂಡು ಹೋಗಿರುವುದು ಗೊತ್ತೇ ಇದೆ. ಸದ್ಯ ಈ ವಿವಾದಕ್ಕೆ ಅಂತ್ಯ ಹಾಡಿದೆ ಕೋಜಿಕ್ಕೋಡ್ ನ್ಯಾಯಾಲಯ.
ನಿನ್ನೆಯಷ್ಟೇ ರಿಷಬ್ ಶೆಟ್ಟಿ ಅವರು,
ಹಾಡಿನ ವಿಚಾರ ಕೋರ್ಟ್‌ನಲ್ಲಿ ಇದೆ. ಅಲ್ಲಿಂದ ಬಂದಾಗಲೇ ಮಾತನಾಡಬೇಕು. ಅದರ ಬಗ್ಗೆ ನಾವು ಇಲ್ಲಿ ಮಾತನಾಡಬಾರದು ಎಂದು ಹೇಳಿದ್ದರು.
ಇದೀಗ ಹಾಡಿನ ತಡೆಯಾಜ್ಞೆಯನ್ನು ನ್ಯಾಯಾಲಯದ ತೆರವುಗೊಳಿಸಿದ್ದು, ಈ ಖುಷಿಯ ವಿಚಾರವನ್ನು ರಿಷಬ್ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ.
ದೇವಾನು ದೈವಗಳ ಆಶೀರ್ವಾದ ಹಾಗೂ ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ ಒಟಿಟಿನಲ್ಲಿ ಹಾಡು ಬದಲಾಯಿಸಲಿದ್ದೇವೆ” ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಕೇರಳ ಹೈಕೋರ್ಟ್ ನಿನ್ನೆಯಷ್ಟೇ ಹೊಂಬಾಳೆ ಬ್ಯಾನರ್, ರಿಷಬ್ ಶೆಟ್ಟಿ, ಪೃಥ್ವಿರಾಜ್ ಫಿಲ್ಮ್ಸ್, ಅಮೆಜಾನ್ ಸೆಲ್ಲರ್ ಸರ್ವೀಸ್ ಪ್ರೈವೇಟ್ ಲಿಮಿಟೆಡ್, ಗೂಗಲ್ ಇಂಡಿಯಾ ಹೆಡ್ ಆಫೀಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಇತರರಿಗೆ ನೋಟೀಸ್ ಜಾರಿ ಮಾಡಿತ್ತು.
‘ವರಾಹ ರೂಪಂ’ ಹಾಡನ್ನು ಯೂಟ್ಯೂಬ್ ನಲ್ಲಿ ಮರಳಿದೆ.

