ಇತ್ತೀಚೆಗೆ ಕಂಟೆಂಟ್ ಆಧಾರಿತ ಸಿನಿಮಾಗಳನ್ನು ಜನ ಹೆಚ್ಚಾಗಿ ನೋಡುತ್ತಿದ್ದಾರೆ. ಇಂಥದ್ದೇ ಹೊಸ ಬಗೆಯ ಕಂಟೆಂಟನ್ನು ಇಟ್ಟುಕೊಂಡು ನಿರ್ದೇಶಕ ರಾಜೇಶ್ ಮೂರ್ತಿ ʼ ಲಿಪ್‌ಸ್ಟಿಕ್ ಮರ್ಡರ್ʼ ಸಿನಿಮಾವನ್ನು ಮಾಡಿದ್ದು ಈ ವಾರ ಸಿನಿಮಾ ತೆರೆಗೆ ಬರಲಿದೆ.
ವಿಶೇಷವೆಂದರೆ ಈ ಸಿನಿಮಾ ಕನ್ನಡದಲ್ಲಿ ನಿರ್ಮಾಣವಾಗಿ, ಬಾಲಿವುಡ್ ನ ಖ್ಯಾತ ಸಂಸ್ಥೆಯೊಂದು ದೊಡ್ಡ ಮೊತ್ತ ಕೊಟ್ಟು ಡಬ್ಬಿಂಗ್ ಹಕ್ಕನ್ನು ಖರೀದಿಸಿದೆ. ಈ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.
ಒಬ್ಬ ಅಬ್ ನಾರ್ಮಲ್ ಯುವತಿಯ ಕಥೆ ಇಟ್ಟುಕೊಂಡು ರಿವೇಂಜ್ ಸ್ಟೋರಿಯನ್ನು ತೆರೆಮೇಲೆ ತಂದಿದ್ದಾರೆ. ನಮಗೆ ಗೊತ್ತಿಲ್ಲದ ಅಪರಿಚಿತರು ಕರೆದಜಾಗಕ್ಕೆ ಯಾವತ್ತೂ ಹೋಗಬಾರದು.ಅದು ತುಂಬಾ ಡೇಂಜರ್ ಎಂಬ ಸಂದೇಶವನ್ನು ಈ ಚಿತ್ರದ ಮೂಲಕ ಹೇಳ ಹೊರಟಿದ್ದಾರೆ ನಿರ್ದೇಶಕ ರಾಜೇಶ್ ಮೂರ್ತಿ.
ಆರ್ಯನ್‌ರಾಜ್ ಈ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದು,ಕಥೆಯಲ್ಲಿ ನಡೆಯುವ ಸರಣಿ ಕೊಲೆಗಳನ್ನು ಪತ್ತೆ ಹಚ್ಚುವ ಪೋಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.




ಇನ್ವೆಸ್ಟಿಗೇಶನ್ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿದ ಲಿಪ್‌ಸ್ಟಿಕ್ ಮರ್ಡರ್ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯಾವುದೇ ಕಟ್ ಇಲ್ಲದೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.
ಸಿನಿವ್ಯಾಲಿ ಕ್ರಿಯೇಶನ್ಸ್ ಮೂಲಕ ಬಿ.ಎಸ್. ಮಂಜುನಾಥ್ ಹಾಗೂ ರಾಜೇಶ್‌ಮೂರ್ತಿ ಸೇರಿ ನಿರ್ಮಿಸಿರುವ ಈ ಚಿತ್ರದಲ್ಲಿ ಆನ್‌ಲೈನ್ ಡೇಟಿಂಗ್ ಆಪ್ ಮೂಲಕ ಯುವತಿಯರು, ಯುವಕರನ್ನು ಯಾವ ರೀತಿ ತಮ್ಮ ಬಲೆಗೆ ಬೀಳಿಸಿಕೊಂಡು ಮೋಸ ಮಾಡುತ್ತಾರೆ ಎಂಬುದನ್ನು ಸಿನಿಮಾದಲ್ಲಿ ಹೇಳಲಾಗಿದೆ.
ಹೈದರಾಬಾದ್ ಮೂಲದ ಅಲೈಕಾ ಈ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ನಿತೀಶ್‌ಕುಮಾರ್ ಅವರ ಸಂಗೀತ ಸಂಯೋಜನೆ, ಆರ್.ವಿನೋದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.



