HomeNews'ಲವ್ ಬರ್ಡ್ಸ್' ಟೀಸರ್ ಗೆ ಮೆಚ್ಚುಗೆ: ಶುಭ ಹಾರೈಸಿದ ಅಜಯ್ ರಾವ್,ವಿಜಯ ರಾಘವೇಂದ್ರ

‘ಲವ್ ಬರ್ಡ್ಸ್’ ಟೀಸರ್ ಗೆ ಮೆಚ್ಚುಗೆ: ಶುಭ ಹಾರೈಸಿದ ಅಜಯ್ ರಾವ್,ವಿಜಯ ರಾಘವೇಂದ್ರ

ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಲಟೀಸರ್ ಬಿಡುಗಡೆ ಮಾಡಿ ಶುಭಕೋರಿದ ವಿಜಯ ರಾಘವೇಂದ್ರ ಹಾಗೂ ಅಜಯ್ ರಾವ್.

ಚಿತ್ರವನ್ನು ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನ ಮಾಡುತ್ತಿದ್ದಾರೆ.


ಈ ವೇಳೆ ಮಾತನಾಡಿದ ನಿರ್ದೇಶಕ ಪಿ.ಸಿ‌.ಶೇಖರ್
ನಾನು ಸಾಮಾನ್ಯವಾಗಿ ಒಂದೇ ತರಹದ ಚಿತ್ರ ಮಾಡುವುದಿಲ್ಲ. ಬೇರೆಬೇರೆ ರೀತಿಯ ಚಿತ್ರ ಮಾಡುತ್ತಿರುತ್ತೇನೆ. ಲಾಕ್ ಡೌನ್ ಸಮಯದಲ್ಲಿ ಬರೆದ ಕಥೆಯಿದು. ಮದುವೆಯಾದ ನನ್ನ ಸ್ನೇಹಿತರು ಹಂಚಿಕೊಳ್ಳುತ್ತಿದ್ದ ಕೆಲವು ವಿಷಯಗಳು ಈ ಕಥೆ ಬರೆಯಲು ಸ್ಪೂರ್ತಿ. ಕಥೆ ಬರೆಯಬೇಕಾದರೆ ಕೃಷ್ಣ – ಮಿಲನ ನಾಗರಾಜ್ ಅವರೆ ನಾಯಕ-ನಾಯಕಿ ಅಂತ ನಿರ್ಧರಿಸಿದ್ದೆ. ಆನಂತರ ನಿರ್ಮಾಪಕ ಚಂದ್ರು ಅವರಿಗೆ ಕಥೆ ಹೇಳಿದೆ. ಅವರು ಚಿತ್ರ ಮಾಡಲು ಮುಂದಾದರು. ಚಿತ್ರತಂಡದ ಸಹಕಾರದಿಂದ “ಲವ್ ಬರ್ಡ್ಸ್” ಚಿತ್ರ ಚೆನ್ನಾಗಿ ಬಂದಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದರು.ನಿರ್ಮಾಪಕ ಕಡ್ಡಿಪುಡಿ ಚಂದ್ರು ಮಾತನಾಡಿ,
ಚಿತ್ರ ಚೆನ್ನಾಗಿ ಬಂದಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ವಿಜಯ ರಾಘವೇಂದ್ರ – ಅಜಯ್ ರಾವ್ ಅವರಿಗೆ ಧನ್ಯವಾದ. ಮುಂದಿನವಾರ ಚಿತ್ರದ ಹಾಡನ್ನು ಬಿಡುಗಡೆ ಮಾಡುತ್ತೇವೆ ಎಂದರು.

ನಾನು ಹಾಗೂ ಮಿಲನ ನಾಗರಾಜ್ “ಲವ್ ಮಾಕ್ಟೇಲ್” ಚಿತ್ರದ ನಂತರ ಮಾಡಿರುವ ಚಿತ್ರವಿದು. ಅದರಲ್ಲಿ ಆದಿ ಹಾಗೂ ನಿಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆವು. ಇದರಲ್ಲಿ ದೀಪಕ್ – ಪೂಜಾ ಪಾತ್ರದಲ್ಲಿ ಅಭಿನಯಿಸಿದ್ದೇವೆ. ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳು ಚೆನ್ನಾಗಿದೆ. ನಿರ್ದೇಶಕ ಪಿ.ಸಿ.ಶೇಖರ್ ಚಿತ್ರವನ್ನು ಚೆನ್ನಾಗಿ ಮಾಡಿದ್ದಾರೆ. ನಿರ್ಮಾಪಕ ಚಂದ್ರು ಅವರಿಗೆ ಧನ್ಯವಾದ ಎಂದರು ಡಾರ್ಲಿಂಗ್ ಕೃಷ್ಣ.


ನಿರ್ಮಾಪಕ ಚಂದ್ರು ಅವರು ತುಂಬಾ ಫಾಸ್ಟ್. ನಾನಿದ್ದ ಜಾಗಕ್ಕೆ ಬಂದು ಈ ಚಿತ್ರದ ಕುರಿತು ಹೇಳಿದರು. ಕಥೆ ಇಷ್ಟವಾಯಿತು. ಪಿ.ಸಿ.ಶೇಖರ್ ಸುಂದರವಾದ ಕಥೆ ಬರೆದಿದ್ದಾರೆ. “ಲವ್ ಬರ್ಡ್ಸ್” ಚಿತ್ರದಲ್ಲಿ ಲವ್ ಅಷ್ಟೇ ಅಲ್ಲ. ಬೇರೆ ವಿಷಯಗಳು ಇದೆ. ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹ ನೀಡಿ ಎಂದು ಮಿಲನ ನಾಗರಾಜ್ ಹೇಳಿದರು.

ಹೊಸಪ್ರತಿಭೆ ಗೌರವ್ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.

RELATED ARTICLES

Most Popular

Share via
Copy link
Powered by Social Snap