ಇದೇ ಶುಕ್ರವಾರ ದೇಶ – ವಿದೇಶದಲ್ಲಿ ‘ಲಕ್ಕಿಮ್ಯಾನ್’ ತೆರೆಗೆ ಬರಲಿದೆ. ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ದೇವರ ಅವತಾರದಲ್ಲಿ ಕಾಣಿಸಲಿದ್ದಾರೆ.


ನಾಗೇಂದ್ರ ಪ್ರಸಾದ್ ನಿರ್ದೇಶನದ ಚಿತ್ರದಲ್ಲಿ ಅವರ ಸಹೋದರ ಪ್ರಭುದೇವ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ‘ಬಾರೋ ರಾಜಾ’ ಹಾಡು ಸಿಕ್ಕಾಪಟ್ಟೆ ಸದ್ದು ಮಾಡಿದೆ. ಪುನೀತ್ -ಪ್ರಭುದೇವಾ ಅಭಿನಯದ ಹಾಡಿಗೆ ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ವಿಜಯ್ ಮತ್ತು ವಿಕ್ಕಿ ಅವರ ಸಂಗೀತ ಸಂಯೋಜನೆಯಿದೆ.
ಇತ್ತೀಚಿಗೆ ಸೆನ್ಸಾರ್ ಮಂಡಳಿ ಸಿನಿಮಾವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಚಿತ್ರಕ್ಕೆ ‘ಯು’ ಸರ್ಟಿಫಿಕೇಟ್ ನೀಡಿದೆ.
ಪಿ.ಆರ್.ಮೀನಾಕ್ಷಿ ಸುಂದರಮ್ ಹಾಗೂ ಸುಂದರ ಕಾಮರಾಜ್ ಅವರ ನಿರ್ಮಾಣವಿದೆ. ಕಾರ್ತಿಕೇಯನ್ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದಾರೆ.



