ಎಪಿ ಅರ್ಜುನ್ – ಧ್ರುವ ಸರ್ಜಾ ‘ಮಾರ್ಟಿನ್’ ಸಿನಿಮಾ ರಿಲೀಸ್ ಗೂ ಮುನ್ನ ಬಿಗ್ ಬಜೆಟ್, ಮೇಕಿಂಗ್ ನಿಂದ ಭರ್ಜರಿ ಸದ್ದು ಮಾಡುತ್ತಿದೆ.
‘ಮಾರ್ಟಿನ್’ ನಲ್ಲಿ ವಿಶೇಷವಾಗಿ ಗಮನ ಸೆಳೆಯುತ್ತಿರುವ ವಿಚಾರವೆಂದರೆ ಸಿನಿಮಾದ ಕ್ಲೈಮ್ಯಾಕ್ಸ್ ಸೀನ್ 45 ದಿನಗಳು ನಡೆದಿದೆ. ರಾಮ್-ಲಕ್ಷ್ಮಣ್ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿರುವುದು ಇದೇ ಮೊದಲ ಬಾರಿಗೆ ಎನ್ನಲಾಗುತ್ತಿದೆ.
ಚಿತ್ರಕ್ಕೆ ಉದಯ್ ಕೆ ಮೆಹ್ತಾ ಅವರ ನಿರ್ಮಾಣವಿದೆ.
ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರ ತಂಡದಿಂದ ಬಿಗ್ ಅಪ್ಡೇಟ್ ವೊಂದು ಹೊರ ಬಿದ್ದಿದ್ದು, ಟೀಸರ್ ಇದೇ ಫೆಬ್ರವರಿಯಲ್ಲಿ ರಿಲತ ಆಗಲಿದೆ ಎಂದು ಧ್ರುವ ಸರ್ಜಾ ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿ ಹಾಕಿ ಅಪ್ಡೇಟ್ ಕೊಟ್ಟಿದ್ದಾರೆ.
ಮಾರ್ಟಿನ್ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್ ಕುಮಾರ್, ನಿಕಿತನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ.



