ಡಾಲಿ ಪಿಕ್ಚರ್ಸ್ ಬ್ಯಾನರ್ ಹಾಗೂ ಕೆ.ಆರ್ .ಜಿ ಸ್ಟುಡಿಯೋಸ್ ಅರ್ಪಿಸುತ್ತಿರುವ ‘ಆರ್ಕೆಸ್ಟ್ರಾ’ ಸಿನಿಮಾ ಸಂಕ್ರಾಂತಿಗೆ ರಿಲೀಸ್ ಆಗಲಿದೆ.
ಚಿತ್ರವನ್ನು ಅಶ್ವಿನ್ ವಿಜಯ್ ಕುಮಾರ್ ಹಾಗೂ ರಘು ದೀಕ್ಷಿತ್ ನಿರ್ಮಿಸಿದ್ದು, ಪೂರ್ಣಚಂದ್ರ ಅಭಿನಯದಲ್ಲಿ, ಸುನೀಲ್ ಮೈಸೂರು ನಿರ್ದೇಶನ, ರಘು ದೀಕ್ಷಿತ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.
ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ ಡಾಲಿ ಧನಂಜಯ ಅವರು ಸಿನಿಮಾದ ಎಲ್ಲಾ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಹಾಡುಗಳು ಸಖತ್ ಹಿಟ್ ಆಗಿವೆ.
ಜನವರಿ 12 ರಂದು ಸಿನಿಮಾ ತೆರೆಗೆ ಬರಲಿದೆ.

