ಮಹೇಶ್ ಸಿ.ಅಮ್ಮಲ್ಲಿದೊಡ್ಡಿ ಅವರ ಚಿತ್ರಕಥೆ ಹಾಗೂ ನಿರ್ದೇಶನ ಮಾಡಿರುವ ವಿಶಿಷ್ಟ ಟೈಟಲ್‌ವುಳ್ಳ ʼಓʼ ಎಂಬ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.
ನಟಿ ಮಿಲನಾ ನಾಗರಾಜ್ ,ಅಮೃತಾ ಅಯ್ಯಂಗಾರ್ ಒಂದೇ ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೊಂದು ವಿಭಿನ್ನ ಪ್ರೇಮಕಥೆ ಹೊಂದಿರುವ ಚಿತ್ರ. ಇತ್ತೀಚೆಗೆ ಚಿತ್ರ ಟ್ರೇಲರ್ ಕೂಡ ಬಿಡುಗಡೆಯಾಗಿದೆ.
ಬ್ಲಾಕ್ ಮ್ಯಾಜಿಕ್, ಹಾರರ್ ಕಂಟೆಂಟ್ ವುಳ್ಳ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಈ ಸಿನಿಮಾದಲ್ಲಿ ಪವರ್ ಸ್ಟಾರ್ ಅಪ್ಪು ಅವರು ಹಾಡಿರುವ ಹಾಡೊಂದು ಇದೆ.
ʼಏನೋ ಒಂದು ಜಾದೂʼ ಲಿರಿಕಲ್ ವಿಡಿಯೋ ಹಾಡು ಇದೇ ಅ.22 ರಂದು ಸಂಜೆ 4 ಗಂಟೆಗೆ ರಿಲೀಸ್ ಆಗಲಿದೆ. ಈ ಹಾಡನ್ನು ಅಪ್ಪು ಹಾಡಿದ್ದಾರೆ ಎನ್ನುವುದು ವಿಶೇಷ.
ಕಿರಣ್ ತಲಕಾಡು ಅವರು ಕಥೆ ಬರೆದು ಏಕಾಕ್ಷರ ಫಿಲಂಸ್ ಬ್ಯಾನರ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಇನ್ನು ಸಿನಿಮಾ ನವೆಂಬರ್ 11 ರಂದು ತೆರೆಗೆ ಬರಲಿದೆ. ಕಿರಣ್ ರವೀಂದ್ರನಾಥ್ ಅವರ ಸಂಗೀತ ಸತೀಶ್ ಬಾಬು ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ಉಗ್ರಂ, ಕೆಜಿಎಫ್ ಖ್ಯಾತಿಯ ಶ್ರೀಕಾಂತ್ ಸಂಕಲನಕಾರರಾಗಿ ಕೆಲಸ ಮಾಡಿದ್ದಾರೆ.



