ಪ್ಯಾನ್ ಇಂಡಿಯಾ ಸ್ಟಾರ್ ರಾಕಿಭಾಯಿ ಯಶ್ ಮುಂದಿನ ಸಿನಿಮಾ ಯಾವುದೆನ್ನುವುದು ಅಭಿಮಾನಿಗಳ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.
ಈ ಪ್ರಶ್ನೆಗೆ ಅಂತೆ – ಕಂತೆಗಳ ಮಾತುಗಳು ಚಿತ್ರ ರಂಗದಲ್ಲಿ ಕೇಳಿ ಬರುತ್ತಿದೆ. ದೊಡ್ಡ ಸಿನಿಮಾವೊಂದರಲ್ಲಿ ಯಶ್ ಕಾಣಿಸಿಕೊಳ್ಳಲಿದ್ದಾರೆ ಎಂದು ಕೆಲ ದಿನಗಳ ಹಿಂದೆ ಸುದ್ದಿ ಹಬ್ಬಿತ್ತು.
‘ಕೆಜಿಎಫ್’ ಬಳಿಕ ಹೊಂಬಾಳೆ ಫಿಲ್ಮ್ಸ್ ಪ್ಯಾನ್ ಇಂಡಿಯಾ ಸಿನಿಮಾಗಳ ನಿರ್ಮಾಣದಲ್ಲಿ ಬ್ಯುಸಿಯಾಗಿದೆ. ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರು ಹೊಂಬಾಳೆ ಜೊತೆ ಸಿನಿಮಾ ಮಾಡುತ್ತಿದ್ದು ಅದಕ್ಕೆ ‘ಟೈಸನ್’ ಎನ್ನುವ ಟೈಟಲ್ ಇಡಲಾಗಿದೆ.
ಇದರ ನಟ ಪೃಥ್ವಿರಾಜ್ ಸುಕುಮಾರನ್ ಯಶ್ ಜೊತೆ ಸಿನಿಮಾ ಮಾಡಲಿದ್ದೇನೆ. ಯಶ್ ಜೊತೆ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಎಲ್ಲಾ ಸಿನಿಮಾ ಇಂಡಸ್ಟ್ರಿ ಅವರು ಒಟ್ಟಾಗಿ ಕೆಲಸ ಮಾಡುವ ಕಾಲ ಬಂದಿದೆ ಎಂದು ಹೇಳಿದ್ದಾರೆ.
ಈ ಮಾತು ಈಗ ವೈರಲ್ ಆಗಿದ್ದು, ಯಶ್ ಅವರ 19ನೇ ಚಿತ್ರ ಇದೆ ಆಗಿರಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಆದರೆ ಇದನ್ನವರು ಯಾವಾಗ ಹೇಳಿದ್ದಾರೆ ಎನ್ನುವುದು ತಿಳಿದಿಲ್ಲ. ನೆಟ್ಟಗರು ಇದನ್ನು ಹುಡುಕುವಲ್ಲಿ ನಿರತರಾಗಿದ್ದಾರೆ.

