ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದಾರೆ ಎಂದು ವರದಿ ತಿಳಿಸಿದೆ.
ಈಡನ್ ಗಾರ್ಡನ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್ ಗಳಿಂದ ಗೆದ್ದು ಸರಣಿ ವಶಪಡಿಸಿಕೊಂಡಿದೆ.
ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ರಾಹುಲ್ ಅವರ ರಕ್ತದೊತ್ತಡದಲ್ಲಿ ಏರುಪೇರಾಗಿದ್ದು, , ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ನ ವೈದ್ಯರು ಔಷಧಿಯನ್ನು ನೀಡಿದೆ.
ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಚಿಕಿತ್ಸೆಯ ಬಳಿಕ ಮೂರನೇ ಏಕದಿನ ಪಂದ್ಯಕ್ಕಾಗಿ ತಂಡದೊಂದಿಗೆ ಸೇರಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

