ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೈದರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಕುರಿತು ವೈದ್ಯರು ಮಾಹಿತಿ ನೀಡಿದ್ದು, ‘ಸಾಮಿ..ಸಾಮಿ.. ಎಂದು ಮೊಣಕಾಲಿನ ಮೇಲೆ ಭಾರ ಹಾಕಿ ಡ್ಯಾನ್ಸ್ ಮಾಡುತ್ತಿದ್ದೀರಿ..
ಈಗ ನೋವು ಬಂದಿದೆ! ಮೊಣಕಾಲು ನೋವಿನಿಂದ ನನ್ನ ಬಳಿಗೆ ಬಂದಿದ್ದೀರಿ ಅಂತಾ ಶ್ರೀವಲ್ಲಿಗೆ ನಾನು ಹೇಳಿದೆʼ ಎಂದು ವೈದ್ಯ ಗುರುವಾ ರೆಡ್ಡಿ ತಮಾಷೆಯಾಗಿ ಈ ಫೋಟೋಗೆ ಕ್ಯಾಪ್ಶನ್ ಬರೆದುಕೊಂಡಿದ್ದಾರೆ.
ಕೆಲವೇ ದಿನಗಳಲ್ಲಿ ಅವರು ಎಂದಿನಂತೆ ಶೂಟಿಂಗ್ ನಲ್ಲಿ ಭಾಗಿಯಾಗಬಹುದೆಂದು ವೈದ್ಯರು ಹೇಳಿದ್ದಾರೆ.
ಸತತವಾಗಿ ಚಿತ್ರೀಕರಣದಲ್ಲಿ ತೊಡಗಿರುವ ಕಾರಣದಿಂದಾಗಿ ರಶ್ಮಿಕಾ ಅವರಿಗೆ ಮೊಣಕಾಲಿನ (Knee) ನೋವಿನ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಎನ್ನಲಾಗಿದೆ.
ಸದ್ಯ ರಶ್ಮಿಕಾ ಅವರ ʼಗುಡ್ ಬೈʼ ಸಿನಿಮಾ ರಿಲೀಸ್ ಆಗಲಿದೆ. ಆ ಬಳಿಕ ಅವರು ʼಮಿಷನ್ ಮಜ್ನುʼ, ಅನಿಮಲ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

