HomeNewsರಕ್ಷಿತ್ ಶೆಟ್ಟಿ ಅಭಿನಯದ "ಸಪ್ತ ಸಾಗರದಾಚೆ ಎಲ್ಲೋ" ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ರಕ್ಷಿತ್ ಶೆಟ್ಟಿ ಅಭಿನಯದ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

‘ಸೈಡ್ A’ ಸೆಪ್ಟೆಂಬರ್ 01ಕ್ಕೆ, ‘ಸೈಡ್ B’ ಅಕ್ಟೋಬರ್ 20ಕ್ಕೆ ಬಿಡುಗಡೆ

ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ A” ಸೆಪ್ಟೆಂಬರ್ 01 ಮತ್ತು ಎರಡನೆಯ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ B” ಅಕ್ಟೋಬರ್ 20ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಮತ್ತು ವಿತರಣೆ ಸಂಸ್ಥೆಯಾದ ಕೆ.ವಿ.ಎನ್. ಪ್ರೊಡಕ್ಷನ್ಸ್ ಈ ಚಿತ್ರಗಳನ್ನು ಬಿಡುಗಡೆ ಮಾಡುತ್ತಿದೆ.

‘ಕವಲು ದಾರಿ’ ನಂತರ ಹೇಮಂತ್ ರಾವ್ ನಿರ್ದೇಶಿಸಿರುವ ಚಿತ್ರ “ಸಪ್ತ ಸಾಗರದಾಚೆ ಎಲ್ಲೋ”. ಈ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದೆ. ಈಗ ಚಿತ್ರದ ಬಿಡುಗಡೆ ದಿನಾಂಕದ ಘೋಷಣೆಯಾಗಿದೆ. ಇಲ್ಲಿಂದ ಚಿತ್ರದ ಪ್ರಚಾರದ ಕೆಲಸಗಳು ಪ್ರಾರಂಭವಾಗಲಿವೆ. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಅವರ ಪಾತ್ರ ಎರಡು ಶೇಡ್ ಗಳಲ್ಲಿರುತ್ತದೆ. ಎರಡು ಕಾಲಘಟ್ಟಗಳಲ್ಲಿ ಕಥೆ ನಡೆಯಲಿದೆ. ರಕ್ಷಿತ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ಗೋಪಾಲಕೃಷ್ಣ ದೇಶಪಾಂಡೆ, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ.
ನಟನೆಯ ಜೊತೆಗೆ ರಕ್ಷಿತ್ ಶೆಟ್ಟಿ “ಸಪ್ತ ಸಾಗರದಾಚೆ ಎಲ್ಲೋ” – ಸೈಡ್ A ಮತ್ತು B’ ಚಿತ್ರಗಳನ್ನು ಪರಂವಃ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿದ್ದಾರೆ. ಹೇಮಂತ್ ರಾವ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಮತ್ತು ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

RELATED ARTICLES

Most Popular

Share via
Copy link
Powered by Social Snap