‘ಕಾಂತಾರ’ದಲ್ಲಿ ಲೀಲಾಳಾಗಿ ಪ್ರೇಕ್ಷಕರ ಮನ ಗೆದ್ದ ಸಪ್ತಮಿ ಗೌಡ ದೊಡ್ಡ ಸಿನಿಮಾ ಹಿಟ್ ಬಳಿಕ ‘ಕಾಳಿ’ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆಗೊಂಡಿದ್ದಾರೆ. ಇದೀಗ ಸಪ್ತಮಿ ಅವರು ನೇರವಾಗಿ ಬಾಲಿವುಡ್ ನಲ್ಲಿ ಮಿಂಚಲು ರೆಡಿಯಾಗಿದ್ದಾರೆ.
ಕಳೆದ ವರ್ಷ ‘ದಿ ಕಾಶ್ಮೀರ್ ಫೈಲ್ಸ್’ ಬಾಲಿವುಡ್ ನಲ್ಲಿ ದೊಡ್ಡ ಹಿಟ್ ಪಡೆದುಕೊಂಡ ವಿವೇಕ್ ಅಗ್ನಿಹೋತ್ರಿ ಈಗ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಸಪ್ತಮಿ ಗೌಡ ವಿವೇಕ್ ಅಗ್ನಿಹೋತ್ರಿ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.
ಹೈದರಾಬಾದ್ನಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಸಪ್ತಮಿ ಗೌಡ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.
ಈ ಸಿನಿಮಾದಲ್ಲಿ ಸಿನಿಮಾದಲ್ಲಿ ನಾನಾ ಪಾಟೇಕರ್, ಅನುಪಮ್ ಖೇರ್, ಪಲ್ಲವಿ ಜೋಶಿ ಮುಂತಾದವರು ಅಭಿನಯಿಸುತ್ತಿದ್ದಾರೆ.

