‘ಉಡುಂಬಾ’ ಸಿನಿಮಾದ ಬಳಿಕ ನಿರ್ದೇಶಕ ಶಿವರಾಜ್ ಸಕ್ರೆ ಅವರ ಎರಡನೇ ಸಿನಿಮಾ ‘‘ಷಡಕ್ಷರಿ ಸನ್ ಆಫ್ ಪಂಚಾಕ್ಷರಿ’ ಫಸ್ಟ್ ಲುಕ್ ರಿವೀಲ್ ಆಗಿದೆ.
ಥ್ರಿಲ್ಲರ್ ಜಾನರ್ ಕಥೆಯನ್ನೊಳಗೊಂಡ ಈ ಸಿನಿಮಾದಲ್ಲಿ ‘ಐ1’ ಸಿನಿಮಾದಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದ ಕಿಶೋರ್ ಅವರು ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇನ್ನುಳಿದಂತೆ ಸಿನಿಮಾದಲ್ಲಿ ಇಬ್ಬರು ನಾಯಕಿಯರು ಕಾಣಿಸಿಕೊಳ್ಳಲಿದ್ದು, ರಂಗಾಯಣ ರಘು, ಸುಜಯ್ ಶಾಸ್ತ್ರಿ, ತೆಲುಗು ಹಾಗೂ ತಮಿಳು ಸಿನಿಮಾ ಖ್ಯಾತಿಯ ಮಧುಸೂದನ್ ಚಿತ್ರದ ತಾರಾಬಳಗದಲ್ಲಿದ್ದಾರೆ.
ಜ.28 ರಂದು ಈ ಸಿನಿಮಾ ಸಟ್ಟೇರಲಿದೆ. ಸುಚೇತನ್ ರಂಗಸ್ವಾಮಿ ಸಂಗೀತ ನಿರ್ದೇಶನ, ಕಬ್ಜ, ಮಾರ್ಟಿನ್, ನಟ ಸಾರ್ವಭೌಮ ಖ್ಯಾತಿಯ ಮಹೇಶ್ ರೆಡ್ಡಿ ಸಂಕಲನ ಈ ಚಿತ್ರಕ್ಕಿದೆ. ಭರ್ಜರಿ ಚೇತನ್, ಜೋಗಿ ಪ್ರೇಮ್, ಅಲೆಮಾರಿ ಸಂತು ಹಾಗೂ ಹೊಸ ಪ್ರತಿಭೆ ಸಂತೋಷ್ ಸಾಹಿತ್ಯದಲ್ಲಿ ಚಿತ್ರದ ಹಾಡುಗಳು ಮೂಡಿ ಬರಲಿವೆ. ಬೆಂಗಳೂರು, ಮಂಗಳೂರು, ಮೈಸೂರು, ಉಡುಪಿಯಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
.ಪಿ. ಪಿಕ್ಚರ್ಸ್ ಬ್ಯಾನರ್ ಅಡಿ ಶೈಲಜಾ ಪ್ರಕಾಶ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

