ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮಿಳಿನ ಧನುಷ್ ಅವರೊಂದಿಗೆ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತೇ ಇದೆ . ಈ ನಡುವೆ ಶಿವಣ್ಣ ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡಿರುವ ಸುದ್ದಿ ಹೊರ ಬಿದ್ದಿದೆ.
ತೆಲುಗು ನಿರ್ದೇಶಕನ ಜೊತೆ ಶಿವಣ್ಣ ಸಿನಿಮಾ ನಟ ಶಿವರಾಜ್‌ಕುಮಾರ್ ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ.
ತೆಲುಗಿನ ಕಾರ್ತಿಕ್ ಅದ್ವೈತ್ ಅವರೊಂದಿಗೆ ಶಿವಣ್ಣ ಸಿನಿಮಾ ಮಾಡಲಿದ್ದಾರೆ. ಈ ಹಿಂದೆ ತಮಿಳಿನಲ್ಲಿ ಚೊಚ್ಚಲ ಬಾರಿ “ಪಾಯಮ್ ಒಲಿ ನೀ ಎನಕ್ಕು” ಚಿತ್ರವನ್ನು ನಿರ್ದೇಶನ ಮಾಡಿದ್ದ ಕಾರ್ತಿಕ್ ಸ್ಯಾಂಡಲ್ ವುಡ್ ಗೆ ತಮ್ಮ ಎರಡನೇ ಚಿತ್ರವನ್ನು ನೀಡಲು ಬರುತ್ತಿದ್ದಾರೆ.
ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ವಿಭಿನ್ನ ಲುಕ್ ಹಾಗೂ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸದ್ಯ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾ ತಂಡ ಬಿಝಿಯಾಗಿದೆ.
ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭವಾಗಲಿದೆ. ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ.
ಚಿತ್ರದ ಟೈಟಲ್, ನಾಯಕಿ, ತಾರಾಬಳಗ, ತಾಂತ್ರಿಕ ವರ್ಗ ಎಲ್ಲವೂ ಇನ್ನಷ್ಟೇ ಫೈನಲ್ ಆಗಬೇಕಿದೆ.
“ಕಿಲ್ಲಿಂಗ್ ವೀರಪ್ಪನ್’ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದ ಹಾಗೂ ತೆಲುಗಿನಲ್ಲಿ “ಆಫೀಸರ್’, “ಗುಡ್ ಲಕ್ ಸಖಿ’ ಸಿನಿಮಾ ನಿರ್ಮಿಸಿರುವ ನಿರ್ಮಾಪಕ ಸುಧೀರ್ ಚಂದ್ರ ಪಡಿರಿ “ಸುಧೀರ್ ಚಂದ್ರ ಫಿಲಂ ಕಂಪನಿ’ ಬ್ಯಾನರ್‌ನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.



