ಗಾಳಿಪಟ-2 ಚಿತ್ರವನ್ನು ನಿರ್ಮಾಣ ಮಾಡಿ ದೊಡ್ಡ ಮಟ್ಟದ ಗೆಲುವು ಸಾಧಿಸಿದ ರಮೇಶ್ ರೆಡ್ಡಿ ಈಗ ಮತ್ತೊಂದು ಹೊಸ ಸಿನಿಮಾಕ್ಕೆ ಕೈ ಹಾಕಿದ್ದಾರೆ.


ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರʼ45ʼ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಅರ್ಜುನ್ ಜನ್ಯ ನಿರ್ದೇಶನದ ಶಿವರಾಜ್ ಕುಮಾರ್ ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ʼ45ʼ ಚಿತ್ರ ಸಟ್ಟೇರುವ ಮುನ್ನ ಸದ್ದು ಮಾಡುತ್ತಿದೆ. ಈ ಚಿತ್ರದ ಬಗ್ಗೆ ಮತ್ತೊಂದು ಆಪ್ಡೇಟ್ ಹೊರ ಬಂದಿದೆ.
ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಈಗ ಮತ್ತೊಬ್ಬ ಸ್ಟಾರ್ ನಟ ಎಂಟ್ರಿಯಾಗಿದ್ದಾರೆ. ರಿಯಲ್ ಸ್ಟಾರ್ ಉಪ್ಪಿ ಶಿವಣ್ಣನೊಂದಿಗೆ ಅಬ್ಬರಿಸಲಿದ್ದಾರೆ. ಉಪೇಂದ್ರ ಸಿನಿಮಾದಲ್ಲಿ ಮತ್ತೊಬ್ಬ ನಾಯಕನಾಗಿ ಎಂಟ್ರಿ ಆಗಲಿದ್ದಾರೆ.
ಶಿವಣ್ಣ ಉಪ್ಪಿ ಈ ಹಿಂದೆ ʼಓಂʼ, ಇಬ್ಬರೂ ‘ಪ್ರೀತ್ಸೇ‘ ಮತ್ತು ‘ಲವ-ಕುಶ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಈಗ ಒಂದು ಲಾಂಗ್ ಗ್ಯಾಪ್ ಬಳಿಕ ಮತ್ತೊಮ್ಮೆ ಒಟ್ಟಾಗಿ ನಟಿಸುತ್ತಿದ್ದು, ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
‘45’, ಈಗ ಪ್ರೀ-ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರದ ಚಿತ್ರೀಕರಣವು ಡಿಸೆಂಬರ್ ಪ್ರಾರಂಭವಾಗಲಿದೆ.

