HomeNewsʼಸೂತ್ರಧಾರಿʼಯ ʼಡ್ಯಾಶ್‌ʼ ಹಾಡಿಗೆ 10 ಮಿಲಿಯನ್‌ ಗೂ ಹೆಚ್ಚಿನ ವೀಕ್ಷಣೆ

ʼಸೂತ್ರಧಾರಿʼಯ ʼಡ್ಯಾಶ್‌ʼ ಹಾಡಿಗೆ 10 ಮಿಲಿಯನ್‌ ಗೂ ಹೆಚ್ಚಿನ ವೀಕ್ಷಣೆ

ಈ ವರ್ಷದ ಆರಂಭದಲ್ಲಿ ರಿಲೀಸ್‌ ಆದ ಗಾಯಕ, ನಟ ಚಂದನ್‌ ಶೆಟ್ಟಿ ಅವರ ʼಸೂತ್ರಧಾರಿʼ ಚಿತ್ರದ “ಡ್ಯಾಶ್‌ʼ ಹಾಡು ಈಗ 10 ಮಿಲಿಯನ್ ಗೂ ಅಧಿಕ ವೀಕ್ಷಣೆ ಕಂಡ ಭರ್ಜರಿ ಹಿಟ್‌ ಆಗಿದೆ.

ಈ ಸಂತಸವನ್ನು ಇತ್ತೀಚೆಗೆ ಕೇಕರ್‌ ಕತ್ತರಿಸಿ ಚಿತ್ರ ತಂಡ ಸಂಭ್ರಮಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ ನವರಸನ್, ‘ನನಗೆ ಈ ಸಂಭ್ರಮ ವಿಶೇಷ. ನಾನು ಇಷ್ಟು ದಿನ ಮಾಡಿರುವ ಸಿನಿಮಾಗಳ ಪೈಕಿ ಇಷ್ಟು ಒಳ್ಳೆಯ ರೆಸ್ಪಾನ್ಸ್ ಯಾವ ಹಾಡಿಗೂ ಸಿಕ್ಕಿಲ್ಲ. ನನ್ನ ಚಿತ್ರದಲ್ಲಿ ಹಿಟ್ ಗೀತೆಯೊಂದು ಬರಬೇಕೆಂದು ಆಸೆಯಿತ್ತು. ಈಗ ಇಡೇರಿದೆ. ಹೊಸ ವರ್ಷಕ್ಕಾಗಿಯೇ ಈ‌ ಸಾಂಗ್ ಮಾಡಿದ್ದೆವು. ಚಿತ್ರದಲ್ಲಿ ಇನ್ನೂ ಮೂರು ಹಾಡುಗಳಿದ್ದು, ಆ ಹಾಡುಗಳು ಅದ್ಭುತವಾಗಿದೆ. ಫೆಬ್ರವರಿಯಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತೇವೆ. ಏಪ್ರಿಲ್, ಮೇನಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದೇವೆ. ಈ ಒಂದು ಕೋಟಿ ವೀಕ್ಷಣೆಯ ಸಕ್ಸಸ್ ಚಿತ್ರತಂಡಕ್ಕೆ ಸಲ್ಲುತ್ತದೆ’ ಎಂದರು.ಈ ಹಾಡನ್ನು ಬರೆದು, ಸಂಗೀತ ಸಂಯೋಜಿಸುವ ಜೊತೆಗೆ ನಾಯಕನಾಗೂ ನಟಿಸಿರುವ ಚಂದನ್ ಶೆಟ್ಟಿ ಮಾತನಾಡಿ, ‘ಸಾಂಗ್ ರಿಲೀಸ್ ಆದ ಮೂರು ವಾರದಲ್ಲೇ ಒಂದು ಕೋಟಿ ವೀಕ್ಷಣೆ ಆಗಿರುವುದು ಮಾಧ್ಯಮಗಳ ಸಹಕಾರದಿಂದ. ಈ ಗೀತೆಗೆ ನಾನು ಹಾಗೂ ಚೇತನ್ ಸೇರಿ ಸಾಹಿತ್ಯ ಬರೆದಿದ್ದೇವೆ’ ಎಂದರು.

‘ಪ್ರಾರಂಭದಲ್ಲಿ ನಿರ್ಮಾಪಕರಿಗೆ ಹಾಡು ಚೆನ್ನಾಗಿ ಬರಬೇಕು ಸರ್. ಇದೇ ಮೊದಲಬಾರಿ ನಾನು ಬೇರೆ ಸಿನಿಮಾವೊಂದರ ಹಾಡಿನಲ್ಲಿ ನಟಿಸುತ್ತಿದ್ದೆನೆ ಎಂದಿದ್ದೆ. ಇಂದು ಈ ಗೀತೆಯಲ್ಲಿ ನಾನಿರುವುದು ಖುಷಿಯಾಗಿದೆ ಎನ್ನುತ್ತಾರೆ ನಟಿ ಸಂಜನಾ ಆನಂದ್.

‘ಈ ಗೀತೆ ನಮ್ಮ ಸಿನಿಮಾಗೆ ಆಮಂತ್ರಣ ಆಗಿದ್ದು, ಹಾಡು ನೋಡಿ ಬಂದ ಜನರನ್ನು ಇಡೀ ಸಿನಿಮಾವನ್ನು ನೋಡುವ ಹಾಗೆ ಮಾಡುವ ಜವಾಬ್ದಾರಿ ನನ್ನದು ಎಂದು ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದರು.

ಕೊರಿಯೋಗ್ರಾಫರ್ ಮೋಹನ್ ಮಾಸ್ಟರ್ ಮಾತನಾಡುತ್ತಾ, ಈ ಹಾಡು ಕೇವಲ ಎರಡು ದಿನಗಳಲ್ಲಿ ಆಗಿದೆ. ನನ್ನ ಮತ್ತು ಚಂದನ್ ಶೆಟ್ಟಿ ಕಾಂಬಿನೇಷನ್ ನ 2ನೇ ಹಿಟ್ ಗೀತೆ ಇದು ಎಂದರು.

ಈ ಸಂತಸದ ಸಮಾರಂಭದಲ್ಲಿ ನಟ ತಬಲಾನಾಣಿ, ಸೆಟ್ ವರ್ಕ್ ಮಾಡಿರುವ ಕಿರಣ್, ನಟಿ ಪಲ್ಲವಿ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಾಹಿತಿ ಕಿನ್ನಾಲ್ ರಾಜ್ ತಮ್ಮ ಅನುಭವ ಹಂಚಿಕೊಂಡರು.

ಸಸ್ಪೆನ್ಸ್, ಥ್ರಿಲ್ಲರ್ ಕಥಾ ಹಂದರ ಒಳಗೊಂಡ ಈ ಚಿತ್ರದಲ್ಲಿ ಅಪೂರ್ವ ನಾಯಕಿಯಾಗಿ ಅಭಿನಯಿಸಿದ್ದಾರೆ.

RELATED ARTICLES

Most Popular

Share via
Copy link
Powered by Social Snap