ರಾಜ್ ಬಿ ಶೆಟ್ಟಿ ಅವರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಯಾವಾಗ ತೆರೆಗೆ ಬರುತ್ತದೆ ಎಂದು ಪ್ರೇಕ್ಷಕರು ಕಾಯುತ್ತಿದ್ದಾರೆ. ರಾಜ್ ಬಿ ಶೆಟ್ಟಿ ಅವರೇ ನಿರ್ದೇಶನ ಹಾಗೂ ನಟಿಸಿರುವುದು ಸಿನಿಮಾದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.
ಇದರೊಂದಿಗೆ ಮೋಹಕ ತಾರೆ ರಮ್ಯಾ ಅವರು ತಮ್ಮ ಆ್ಯಪಲ್ ಬಾಕ್ಸ್ ಪ್ರೊಡಕ್ಷನ್ ನಲ್ಲಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ಇದಾಗಿರುವುದರಿಂದ ಕುತೂಹಲ ಹೆಚ್ಚಿಸಿದೆ.
ಸಿನಿಮಾದಲ್ಲಿ ಸಿರಿ ರವಿಕುಮಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಇತ್ತೀಚೆಗೆ ಅವರ ಹಾಗೂ ನಾಯಕ ರಾಜ್ ಬಿ ಶೆಟ್ಟಿ ಅವರು ಪಾತ್ರದ ಲುಕ್ ರಿವೀಲ್ ಆಗಿದೆ.
ಚಿತ್ರೀಕರಣ ಮುಗಿಸಿ ಪ್ರೊಡಕ್ಷನ್ ಹಂತದಲ್ಲಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ತೆರೆಗೆ ಬರುವ ದಿನಾಂಕವನ್ನು ಪ್ರೇಕ್ಷಕರು ಮುಂದೆ ನೋಡುತ್ತಿದ್ದಾರೆ.

