HomeNewsಸದ್ದು ಮಾಡುತ್ತಿದೆ ʼಟೆರರ್"‌ ಚಿತ್ರದ ಫಸ್ಟ್‌ ಲುಕ್‌ ಪೋಸ್ಟರ್‌

ಸದ್ದು ಮಾಡುತ್ತಿದೆ ʼಟೆರರ್”‌ ಚಿತ್ರದ ಫಸ್ಟ್‌ ಲುಕ್‌ ಪೋಸ್ಟರ್‌

ಆದಿತ್ಯ ಅಭಿನಯದ ಮೊದಲ ಪ್ಯಾನ್‌ ಇಂಡಿಯಾ ಸಿನಿಮಾ “ಟೆರರ್” ಚಿತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ಇತ್ತೀಚೆಗೆ ರಿಲೀಸ್‌ ಆಯಿತು. ಜನವರಿಯಲ್ಲಿ ಚಿತ್ರಕ್ಕೆ ಮುಹೂರ್ತ ನಡೆಯಲಿದೆ.

ಉಪೇಂದ್ರ ಅಭಿನಯದ “A” ಚಿತ್ರ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ಮುಸಿರುವ ಸಿಲ್ಕ್ ಮಂಜು ಈ ಚಿತ್ರವನ್ನು‌ ನಿರ್ಮಾಣ ಮಾಡುತ್ತಿದ್ದಾರೆ.

ರಂಜನ್ ಶಿವರಾಮ ಗೌಡ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ರಂಜನ್ ಅವರದೆ.

ಇದೇ ಮೊದಲ ಬಾರಿಗೆ ಆದಿತ್ಯ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಆದಿತ್ಯ ಅವರು ಈ ಹಿಂದೆ ಅಭಿನಯಿಸಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಈತನಕ ಯಾರು ಮಾಡಿರದ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಹೇಳಬಹುದು. ಆದಿತ್ಯ ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ದಕ್ಷಿಣ ಭಾರತದ ಸುಪ್ರಸಿದ್ಧ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವುದಾಗಿ ನಿರ್ದೇಶಕ ರಂಜನ್ ಶಿವರಾಮ ಗೌಡ ತಿಳಿಸಿದ್ದಾರೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಹರ್ಷವರ್ಧನ್ ರಾಜ್ ಸಂಗೀತ ನೀಡಲಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಕನಲ್ ಕಣ್ಣನ್ ಅವರ ಸಾಹಸ ನಿರ್ದೇಶನ “ಟೆರರ್” ಚಿತ್ರಕ್ಕಿರಲಿದೆ.

RELATED ARTICLES

Most Popular

Share via
Copy link
Powered by Social Snap