HomeNewsಶೀಘ್ರದಲ್ಲಿ 'ಉಸಿರೇ ಉಸಿರೇ' ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್ ಭಾಗಿ

ಶೀಘ್ರದಲ್ಲಿ ‘ಉಸಿರೇ ಉಸಿರೇ’ ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್ ಭಾಗಿ

ಬಿಗ್ ಬಾಸ್ ಖ್ಯಾತಿಯ ರಾಜೀವ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ‘ಉಸಿರೇ ಉಸಿರೇ’ ಚಿತ್ರ ತಂಡ ಅಂತಿಮ ಹಂತದ ಚಿತ್ರೀಕರಣದಲ್ಲಿದೆ.

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ ಸಿ ಎಂ ವಿಜಯ್ ನಿರ್ದೇಶನದ “ಉಸಿರೇ ಉಸಿರೇ” ಚಿತ್ರದ ಕೊನೆಯ ಹಂತದ ಚಿತ್ರೀಕರಣದಲ್ಲಿ
ಪ್ರಮುಖ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಪಾಲ್ಗೊಳ್ಳಲಿದ್ದಾರೆ. ಚಿತ್ರತಂಡ ಅಭಿನಯ ಚಕ್ರವರ್ತಿಯನ್ನು ಭೇಟಿಯಾಗಿದೆ.

“ಬಿಗ್ ಬಾಸ್” ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿಯ ಸಂಗೀತವಿದೆ.

RELATED ARTICLES

Most Popular

Share via
Copy link
Powered by Social Snap