ರೋಹಿತ್ ಪದಕಿ ಮತ್ತು ಡಾಲಿ ಧನಂಜಯ ಕಾಂಬಿನೇಷನ್ ನಲ್ಲಿ ಬರುತ್ತಿರುವ ‘ಉತ್ತರಖಂಡ’ ಸಿನಿಮಾದ ಮುಹೂರ್ತ ಇಂದು ನೆರವೇರಿದೆ.
ಈ ಸಿನಿಮಾವನ್ನು ಕೆ.ಆರ್.ಜಿ. ಸ್ಟುಡಿಯೋಸ್ ನ ಕಾರ್ತಿಕ್ – ಯೋಗಿ.ಜಿ.ರಾಜ್ ಅವರು ನಿರ್ಮಾಣ ಮಾಡುತ್ತಿದ್ದಾರೆ.
ಈ ಚಿತ್ರವನ್ನು ವಿಜಯ್ ಕಿರಗಂದೂರು ಪ್ರಸ್ತುತ ಪಡಿಸುತ್ತಿದ್ದಾರೆ.
ಸಿನಿಮಾದಲ್ಲಿ ರಮ್ಯಾ ನಟಿಸಲಿದ್ದಾರೆ. ಆ ಮೂಲಕ ಮೋಹಕ ತಾರೆ ಕಂಬ್ಯಾಕ್ ಮಾಡಲಿದ್ದಾರೆ ಎನ್ನುವ ಸುದ್ದಿಗಳು ಹಬ್ಬಿತ್ತು. ಆದರೆ ಇದಕ್ಕೆ ಇನ್ನಷ್ಟು ಪುಷ್ಟಿ ನೀಡುವಂತೆ. ರಮ್ಯಾ ಅವರು ಮುಹೂರ್ತದ ಫೋಟೋವನ್ನು ಸ್ಟೋರಿ ಮೂಲಕ ಹಂಚಿಕೊಂಡಿದ್ದಾರೆ.
ರಮ್ಯಾ ಸದ್ಯ ನಿರ್ಮಾಣದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಆ್ಯಪಲ್ ಬಾಕ್ಸ್ ಪ್ರೊಡಕ್ಷನ್ ನಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಬರುತ್ತಿದೆ. ಈ ನಡುವೆ ಅವರು ಚಿತ್ರ ರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.
ರಮ್ಯಾ ಹಾಗೂ ಡಾಲಿ ಧನಂಜಯ ಜೊತೆಯಾಗಿ ‘ಉತ್ತರಖಂಡ’ ಮುಹೂರ್ತದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗಿದೆ. ರಮ್ಯಾ ಕಂಬ್ಯಾಕ್ ಈ ಮೂಲಕ ಪಕ್ಕಾ ಎನ್ನುವುದು ಅಭಿಮಾನಿಗಳ ಚರ್ಚೆ.


ಚರಣ್ ರಾಜ್ ಅವರು ಸಂಗೀತ ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಸ್ವಾಮಿ ಅವರು ಛಾಯಾಗ್ರಾಹಕರಾಗಿದ್ದಾರೆ. ದೀಪು ಎಸ್ ಕುಮಾರ್ ಅವರು ಸಂಕಲನ ಮತ್ತು ವಿಶ್ವಾಸ್ ಕಶ್ಯಪ್ ಅವರು ವಿನ್ಯಾಸದ ಜವಾಬ್ಧಾರಿ ವಹಿಸಿಕೊಂಡಿದ್ದಾರೆ.
ನಟಿ ರಮ್ಯಾ ಮಾತಾನಾಡಿ,‘ರತ್ನನ್ ಪ್ರಪಂಚ’ಚಿತ್ರಕ್ಕೆ ನಾಯಕಿಯ ಪಾತ್ರವನ್ನು ನನಗೆ ಕೇಳಿದಾಗ ಕಾರಣಾಂತರಗಳಿಂದ ಅದನ್ನು ಒಪ್ಪಿಕೊಳ್ಳಲಾಗಿರಲಿಲ್ಲ. ನನಗೆ ಅತ್ಯಂತ ಆಪ್ತವಾದ ಸಿನೆಮಾ ರತ್ನನ್ ಪ್ರಪಂಚ. ಅಂತಹ ಒಳ್ಳೆಯ ಸಿನೆಮಾ ತಂಡದ ಜೊತೆ ಕೈ ಜೋಡಿಸಿ ಬೆಳ್ಳಿಪರದೆಗೆ ಹಿಂತಿರುಗುತ್ತಿರುವುದು ಸಂತೋಷ ತಂದಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಮತ್ತು ತಂಡದವರೆಲ್ಲರು ನನ್ನ ಮೇಲೆ ತೋರುತ್ತಿರುವ ಅಭಿಮಾನ ಹಾಗು ಬಾಂಧವ್ಯ ಒಂದು ಒಳ್ಳೇ ಜಾಗದಲ್ಲಿದ್ದೀನಿ ಅನ್ನೋ ಭಾವನೆ ಕೊಟ್ಟಿದೆ.
ಇಂತಹ ದೈತ್ಯ ಪ್ರತಿಭೆಗಳ ಜೊತೆ ಶೂಟಿಂಗ್ ಶುರು ಮಾಡೋದಕ್ಕೆ ಕಾಯ್ತ ಇದ್ದೀನಿ ಎಂದರು.
ಡಾಲಿ ಧನಂಜಯ ಮಾತಾನಾಡಿ, ಪ್ರತಿ ಬಾರಿ ನನ್ನ ಪರವಾಗಿ ನಿಂತು ಯುದ್ಧ ಮಾಡುವ ಮಾಧ್ಯಮ ಮಿತ್ರರು, ನನ್ನ ಮೇಲೆ ನಂಬಿಕೆಯಿಟ್ಟು ನನ್ನ ಶಕ್ತಿಯಾಗಿ ನಿಂತಿರುವ ಕನ್ನಡ ಕುಲಕೋಟಿಗೆ ನನ್ನ ಹೃದಯಪೂರ್ವಕ ನಮನಗಳು. ಹೀಗೆ ಜೊತೆಗಿರಿ, ತಪ್ಪಾದಾಗ ತಿದ್ದಿ, ಗೆಲುವಾಗುವಂತೆ ಹರಸಿ, ಮೆರೆಸಿ.” ಎಂದು ಹೇಳಿದರು.
ನಿರ್ದೇಶಕ ರೋಹಿತ್ ಪದಕಿ ಅವರು ಮಾತಾನಾಡಿ,‘ಈ ಸಿನೆಮಾ ಮನುಷ್ಯನ ವಿಲಕ್ಷಣ ಮನಸ್ಸಿನ ಹೋರಾಟವನ್ನ ಬಿಂಬಿಸುತ್ತದೆ. ಸರಿ ತಪ್ಪುಗಳ ಸಿದ್ದಾಂತ, ಅಹಂಕಾರಗಳ ಗುದ್ದಾಟ. ಈ ಸಿನೆಮಾ ಒಂದು ಸೆಲೆಬ್ರೇಶನ್.


ಉತ್ತರಕರ್ನಾಟಕದ ಅಧ್ಬುತ ಬದುಕಿನ ನಡುವೆ ನಡೆಯುವ ಕಥೆ ಹೇಳುತ್ತಿರುವುದು ನನಗೆ ದೊಡ್ಡ ಸವಾಲು ಮತ್ತು ಜವಾಬ್ದಾರಿʼ. ಚಿತ್ರ ಸಂಪೂರ್ಣ ಉತ್ತರಕರ್ನಾಟಕದ ಸೊಗಡಲ್ಲಿ, ಭಾಷೆಯಲ್ಲಿ ಇರುತ್ತದೆ. ಹಾಗೂ ಅಲ್ಲಿಯೇ ಚಿತ್ರೀಕರಣವಾಗಲಿದೆ ಎಂದರು.
“ಕೆ.ಆರ್.ಜಿ ಸಂಸ್ಥೆ ಧನಂಜಯ ಅವರ ಜೊತೆ ಕೈಜೋಡಿಸಿರುವ ಮೂರನೇ ಚಿತ್ರ ಇದು. ಚಿತ್ರರಂಗದಲ್ಲಿ ಅತ್ಯಂತ ಬೇಡಿಕೆಯಲ್ಲಿ ಇರುವ ನಟ ಧನಂಜಯ. ಸ್ಯಾಂಡಲ್‌ವುಡ್ ಕ್ವೀನ್ ರಮ್ಯ ಅವರ ಕಮ್‌ಬ್ಯಾಕ್ ಚಿತ್ರ ಇದಾಗ್ತಿರೋದು ಕೂಡ ನಮ್ಮ ಖುಷಿಯನ್ನ ದುಪ್ಪಟ್ಟು ಮಾಡಿದೆ. ಇನ್ನು ರೋಹಿತ್ ಪದಕಿ ಮತ್ತು ಕೆಆರ್‌ಜಿ ಸ್ಟುಡಿಯೋಸ್ ಸಂಬಂಧ ಉನ್ನತ ಮಟ್ಟದಲ್ಲಿದೆ.
ಸಿನಿಮಾ ಖಂಡಿತ ಒಂದು ಮೈಲ್ಲುಗಲ್ಲಾಗುತ್ತದೆ ಎಂದು ಎಂದು ಕಾರ್ತಿಕ್ ಮತ್ತು ಯೋಗಿ ಜಿ ರಾಜ್ ಹೇಳಿದರು.
ಮುಂದಿನ ದಿನದಲ್ಲಿ ಚಿತ್ರ ತಂಡದ ಇತರೆ ತಾರೆಯರ ಬಗ್ಗೆ ಅನೌನ್ಸ್ ಮಾಡುತ್ತೇವೆ ಎಂದು ನಿರ್ಮಾಪಕರು ಹೇಳಿದರು.

