ಒಂದಷ್ಟು ವಿಚಾರಕ್ಕೆ ಸದ್ದು ಮಾಡುತ್ತಿರುವ ಪ್ರಜ್ವಲ್ ದೇವರಾಜ್ ಅವರ ‘ವೀರಂ’ ಸಿನಿಮಾ ರಿಲೀಸ್ ಗೂ ಮುನ್ನ ಗಮನ ಸೆಳೆಯುತ್ತಿದೆ.
ಡೈನಾಮಿಕ್ ಪ್ರಿನ್ಸ್ ಇತ್ತೀಚಿನ ವರ್ಷಗಳಲ್ಲಿ ಲವರ್ ಬಾಯ್, ಪೊಲೀಸ್ ಅವತಾರದಲ್ಲಿ ಕಾಣಿಸಿಕೊಂಡದ್ದು ಹೆಚ್ಚು, ಆದರೆ ‘ವೀರಂ’ ಚಿತ್ರದಲ್ಲಿ ಔಟ್ & ಔಟ್ ಮಾಸ್ ಲುಕ್ ನಲ್ಲಿ ಪ್ರಜ್ವಲ್ ಕಾಣಿಸಿಕೊಳ್ಳಲಿದ್ದಾರೆ.
‘ವೀರಂ’ ಚಿತ್ರದಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ಪ್ರಜ್ವಲ್ ಕಾಣಿಸಿಕೊಂಡಿದ್ದು, ಕೈಯಲ್ಲಿ ವಿಷ್ಣು ಅವರ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಸಿನಿಮಾ ರಿಲೀಸ್ ಆಗಿರಬೇಕಿತ್ತು. ಕಾರಣಾಂತರಗಳಿಂದ ಸಿನಿಮಾ ರಿಲೀಸ್ ಡೇಟ್ ಮುಂದೂಡಿಕೆ ಆಗುತ್ತಾ ಬಂದಿದ್ದು ಈಗ ಅಂತಿಮ ಸಿನಿಮಾ ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ರಿಲೀಸ್ ಆಗಲಿದೆ ಎಂದು ಚಿತ್ರ ತಂಡ ಅನೌನ್ಸ್ ಮಾಡಿದೆ.
ಈ ಸಿನಿಮಾವನ್ನು ಕುಮಾರ್ ರಾಜ್ (ಖದರ್ ಕುಮಾರ್) ನಿರ್ದೇಶನ ಮಾಡಿದ್ದು,ಶಶಿಧರ್ ಕೆ.ಎಂ. ಬಂಡವಾಳ ಹಾಕಿದ್ದಾರೆ. ಇನ್ನು ಸಿನಿಮಾದ ಮೇಕಿಂಗ್ ಕೂಡ ಅದ್ದೂರಿಯಾಗಿ ಮೂಡಿ ಬಂದಿದ್ದು, ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್, ಶ್ರುತಿ, ಶ್ರೀನಗರ ಕಿಟ್ಟಿ, ಶಿಷ್ಯ ದೀಪಕ್, ರಚಿತಾ ರಾಮ್ ಮುಂತಾದವರು ನಟಿಸಿದ್ದಾರೆ.
ಲವಿತ್ ಛಾಯಾಗ್ರಹಣ, ಅನೂಪ್ ಸಿಳೀನ್ ಸಂಗೀತ ನಿರ್ದೇಶನ, ರವಿಚಂದ್ರನ್ ಸಂಕಲನ, ಡಿಫರೆಂಡ್ ಡ್ಯಾನಿ ಸಾಹಸ ನಿರ್ದೇಶನ ‘ವೀರಂ’ ಚಿತ್ರಕ್ಕಿದೆ.

