HomeNewsಎರಡು ಪಾರ್ಟ್ ಗಳಲ್ಲಿ ರಿಲೀಸ್ ಆಗಲಿದೆ ವಿಜಯ್ ಸೇತುಪತಿ ಅವರ 'ವಿಡುದಲೈ'

ಎರಡು ಪಾರ್ಟ್ ಗಳಲ್ಲಿ ರಿಲೀಸ್ ಆಗಲಿದೆ ವಿಜಯ್ ಸೇತುಪತಿ ಅವರ ‘ವಿಡುದಲೈ’

ವೆಟ್ರಿಮಾರನ್ ನಿರ್ದೇಶನದ,
ತಮಿಳಿನ ಸ್ಟಾರ್ ನಟರಾದ ವಿಜಯ್ ಸೇತುಪತಿ ಹಾಗೂ ಸೂರಿ ನಟಿಸುತ್ತಿರುವ ‘ವಿಡುದಲೈ’ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದೆ.


ಈ ಚಿತ್ರವನ್ನು ರೆಡ್ ಜಯಂಟ್ ಮೂವಿಸ್ನಡಿ ಉದಯನಿಧಿ ಸ್ಟಾಲಿನ್ ಅರ್ಪಿಸಿದರೆ, ಆರ್.ಎಸ್. ಇನ್ಫೋಟೈನ್ಮೆಂಟ್ನಡಿ ಎಲ್ರೆಡ್ ಕುಮಾರ್ ನಿರ್ಮಿಸುತ್ತಿದ್ದಾರೆ.


ಚಿತ್ರ ಸಟ್ಟೇರಿದ ದಿನದಿಂದ ಒಂದಲ್ಲ, ಒಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಕಾಲಿವುಡ್ ನ ಇಬ್ಬರು ಸ್ಟಾರ್ ಗಳು ಜೊತೆಯಾಗಿ ನಟಿಸುತ್ತಿರುವುದರಿಂದ ಚಿತ್ರದ ಮೇಲೆ ನಿರೀಕ್ಷೆಗಳು ಹೆಚ್ಚಾಗಿದೆ.

ಚಿತ್ರದ ‘ವಿಡುದಲೈ’ ಚಿತ್ರದ ಭಾಗ ಒಂದರ ಚಿತ್ರೀಕರಣ ಸಂಪೂರ್ಣವಾಗಿದ್ದು, ಪೋಸ್ಟ್ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿವೆ. ಎರಡನೆಯ ಭಾಗದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು ಸಿರುಮಲೈ, ಕೊಡೈಕೆನಾಲ್ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.


ದುಬಾರಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸಿನಿಮಾದ ಚಿತ್ರೀಕರಣಕ್ಕೆ
ರೈಲ್ವೇ ಸೇತುವೆಯ ಸೆಟ್ ನಿರ್ಮಾಣ ಮಾಡಲಾಗಿದೆ. ನಿಜವಾದ ರೈಲ್ವೆ ಬೋಗಿಗಳು ಮತ್ತು ಸೇತುವೆಯನ್ನು ನಿರ್ಮಿಸುವುದಕ್ಕೆ ಬಳಸಲಾಗುವ ಪರಿಕರಗಳನ್ನೇ ಈ ಸೆಟ್ ನಿರ್ಮಾಣಕ್ಕೆ ಬಳಸಿದ್ದಾರೆ.


ಪೀಟರ್ ಹೇನ್ಸ್ ನಿರ್ದೇಶನದಲ್ಲಿ ಸಾಹಸಮಯ ದೃಶ್ಯಗಳನ್ನು ಚಿತ್ರೀಕರಿಸುವುದಕ್ಕೆ ತಯಾರಿ ನಡೆಸಲಾಗಿದ್ದು, ಇದಕ್ಕಾಗಿ ಬಲ್ಗೇರಿಯಾದಿಂದ ಸಾಹಸ ಕಲಾವಿದರನ್ನು ಕರೆಸಲಾಗಿದೆ. ಈ ಆ್ಯಕ್ಷನ್ ದೃಶ್ಯಗಳಲ್ಲಿ ಬಲ್ಗೇರಿಯಾದ ಸಾಹಸ ಕಲಾವಿದರು ಭಾಗಿಯಾಲಿದ್ದಾರೆ.

‘ವಿಡುದಲೈ’ ಚಿತ್ರದಲ್ಲಿ ವಿಜಯ್ ಸೇತುಪತಿ, ಸೂರಿ, ಭವಾನಿ ಶ್ರೀ, ಪ್ರಕಾಶ್ ರಾಜ್, ಗೌತಮ್ ವಾಸುದೇವ ಮೆನನ್, ರಾಜೀವ್ ಮೆನನ್ ಮುಂತಾದವರು ನಟಿಸುತ್ತಿದ್ದಾರೆ.


ಇಳಯರಾಜ ಈ ಚಿತ್ರಕ್ಕೆ ಸಂಗೀತ ನೀಡಿದ್ದು,
ವೇಲ್ರಾಜ್ ಛಾಯಾಗ್ರಹಣ ಮಾಡುತ್ತಿದ್ದಾರೆ.

ಶೀಘ್ರದಲ್ಲಿ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಲಿದೆ.

RELATED ARTICLES

Most Popular

Share via
Copy link
Powered by Social Snap