ರಾಕಿಂಗ್ ಸ್ಟಾರ್ ಯಶ್ ಅವರಿಗೆ ದೊಡ್ಡ ಅಭಿಮಾನಿಗಳ ವರ್ಗವೇ ಇದೆ. ಕೆಜಿಎಫ್ ಸರಣಿ ಬಳಿಕ ಅವರಿಗೆ ಗ್ಲೋಬಲ್ ಲೆವೆಲ್ ನಲ್ಲಿ ಫ್ಯಾನ್ಸ್ ಗಳು ಹುಟ್ಟಿಕೊಂಡಿದ್ದಾರೆ. ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಯಶ್ ಅವರೊಂದಿಗೆ ಹಾಕಿಕೊಂಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಹಾರ್ಡ್ ಹಿಟರ್ ಹಾರ್ದಿಕ್ ಪಾಂಡ್ಯ ಹಾಗೂ ಸಹೋದರ ಕೃಣಾಲ್ ಪಾಂಡ್ಯ ಅವರು ರಾಕಿಂಗ್ ಸ್ಟಾರ್ ಯಶ್ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಯಾಪ್ಷನ್ ನಲ್ಲಿ ಕೆಜಿಎಫ್ -3 ಎಂದು ಬರೆದುಕೊಂಡಿದ್ದಾರೆ.
ಕ್ಯಾಪ್ಷನ್ ನಲ್ಲಿ ಕೆಜಿಎಫ್ -3 ಎಂದು ಬರೆದ ಬಳಿಕ ಟ್ವಟರ್ ನಲ್ಲಿ ಕೆಜಿಎಫ್ -3 ಟ್ರೆಂಡಿಂಗ್ ಆಗಿದೆ. ಸಾವಿರಾರು ಪ್ರೇಕ್ಷಕರು ಕೆಜಿಎಫ್ -3 ಎಂದು ಟ್ವೀಟ್ ಮಾಡಿದ್ದಾರೆ.
ಪಾಂಡ್ಯ ಬ್ರದರ್ಸ್ ಯಾವಾಗ ಯಶ್ ರನ್ನು ಭೇಟಿಯಾಗಿದ್ದಾರೆ. ಎಲ್ಲಿ ಭೇಟಿಯಾಗಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.
ಶ್ರೀಲಂಕಾ ವಿರುದ್ಧದ ಸರಣಿಯ ಸಿದ್ಧತೆಯಲ್ಲಿದ್ದು, ಟಿ20 ತಂಡದ ನಾಯಕನಾಗಿ ಆಯ್ಕೆಗೊಂಡಿದ್ದಾರೆ.



