2022ರ ಜುಲೈ ಅವಧಿಯ ಭಾರತದ ಟಾಪ್ 10 ಜನಪ್ರಿಯ ನಟರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ದಕ್ಷಿಣ ಭಾರತದ ಸ್ಟಾರ್ ಗಳೇ ಇದರಲ್ಲಿ ಕಾಣಿಸಿಕೊಂಡಿದ್ದಾರೆ.
Ormax ಮೀಡಿಯಾ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಟಾಪ್ 10 ನಟರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇತ್ತೀಚೆಗೆ ದಕ್ಷಿಣ ಭಾರತದ ಸಿನಿಮಾಗಳು ಹೆಚ್ಚಾಗಿ ಯಶಸ್ಸು ಸಾಧಿಸುತ್ತಿದ್ದು, ಈ ಪಟ್ಟಿಯಲ್ಲಿ ದಕ್ಷಿಣದ ಸ್ಟಾರ್ ನಟರೇ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ.
ಮೊದಲ ಸ್ಥಾನವನ್ನು ದಳಪತಿ ವಿಜಯ್ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ಅವರ ‘ಬೀಸ್ಟ್’ ಚಿತ್ರ ಹೇಳುಕೊಳ್ಳುವಷ್ಟು ಕಲೆಕ್ಷನ್ ಮಾಡದಿದ್ದರೂ, ಅವರ ಮೇಲಿನ ಅಭಿಮಾನಿ ಕಡಿಮೆಯಾಗಿಲ್ಲ ಎನ್ನುವುದನ್ನು ಇದು ತೋರಿಸುತ್ತದೆ.
ಟಾಲಿವುಡ್ ಸ್ಟಾರ್ ಪ್ರಭಾಸ್ ಅವರಿಗೆ ಎರಡನೇ ಸ್ಥಾನ ಸಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಆರ್.ಆರ್.ಆರ್’ ಮೂಲಕ ಮಿಂಚಿದ ಜೂ.ಎನ್ ಟಿಆರ್ ಕಾಣಿಸಿಕೊಂಡಿದ್ದಾರೆ. ‘ಪುಷ್ಪ’ ಚಿತ್ರದಿಂದ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದ ಅಲ್ಲು ಅರ್ಜುನ್ಗೆ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕೆಜಿಎಫ್ ಮೂಲಕ ವಿಶ್ವದೆಲ್ಲೆಡೆ ಅಭಿಮಾನಿಗಳ ಪ್ರೀತಿಗಳಿಸಿಕೊಂಡ ಪ್ಯಾನ್ ಇಂಡಿಯಾ ಸ್ಟಾರ್ ರಾಕಿಭಾಯ್ ಯಶ್ 5ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ರಾಮ್ ಚರಣ್ (6), ಅಕ್ಷಯ್ ಕುಮಾರ್ (7), ಮಹೇಶ್ ಬಾಬು (8), ಸೂರ್ಯ (9), ಅಜಿತ್ ಕುಮಾರ್ (10) ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

