ಇತ್ತೀಚೆಗೆ ನಡೆದ ನಟ ದರ್ಶನ್ ಅವರ ಮೇಲಾದ ಕೃತ್ಯಕ್ಕೆ ರಾಜ್ ಕುಟುಂಬದ ಕುಡಿ ಯುವರಾಜ್ ಬರಹದ ಮೂಲಕ ತಮ್ಮ ಮಾತನ್ನು ಹೇಳಿದ್ದಾರೆ.
ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲು ನಾನು ತುಂಬ ಚಿಕ್ಕವನು. ಆದ್ರೆ, ತುಂಬ ಹೆಮ್ಮೆಯಿಂದ ಒಂದು ವಿಷಯ ಹೇಳೇಕಂದ್ರೆ.. ನಮ್ಮ ಕುಟುಂಬದ ಅಭಿಮಾನಿಗಳು ನಮ್ಮ ತಾತನವರ ಕಾಲದಿಂದ, ಇವತ್ತಿನವರಿಗೂ ಕನ್ನಡ ಚಿತ್ರರಂಗದ ಪ್ರತಿ ಕಲಾವಿದರಿಗೂ ಬೆಂಬಲವಾಗಿ ನಿಂತಿದ್ದಾರೆ. ಎಲ್ಲಾ ಸಂದರ್ಭದಲ್ಲೂ ಸಭ್ಯತೆ ಮತ್ತು ಘನತೆಯಿಂದಲೇ ನಡೆದುಕೊಂಡಿದ್ದಾರೆ. ಪ್ರತಿಯೊಬ್ಬರನ್ನು ಗೌರವದಿಂದ ಕಾಣುವ, ಪ್ರೀತಿ ವಿಶ್ವಾಸವನ್ನು ಹಂಚುವ ಸಂಸ್ಕೃತಿಯುಳ್ಳ ಅಭಿಮಾನಿಗಳೇ ದೇವರು.
ಆದರೆ, ಗೌರವ ಯಾವಾಗಲೂ ಪರಸ್ಪರ ಅಲ್ವಾ? ಅಪ್ಪು ಚಿಕ್ಕಪ್ಪನ ನಡವಳಿಕೆ, ಸಾಮಾಜಿಕ ಪ್ರಜ್ಞೆ, ಮಹಿಳೆಯರನ್ನು ಗೌರವಿಸುವುದು, ಎಲ್ಲರನ್ನೂ ಪ್ರೀತಿಸುವ ಅವರ ವ್ಯಕ್ತಿತ್ವದ ಬಗ್ಗೆ ಪ್ರತಿಯೊಬ್ಬರಿಗೂ ಚೆನ್ನಾಗಿಯೇ ತಿಳಿದಿದೆ, ಅವರ ವ್ಯಕ್ತಿತ್ವ ಎಂದೆಂದಿಗೂ ಎಲ್ಲರಿಗೂ ಮಾದರಿಯಾಗಿ ಇರುತ್ತದೆ ಅವರ ಬಗ್ಗೆ ಅಗೌರವದಿಂದ ಅವಹೇಳನಕಾರಿಯಾಗಿ ಮಾತನಾಡಿ ಅವರ ಅಭಿಮಾನಿಗಳನ್ನು ಕೆಣಕಿದರೆ, ಅವರ ಭಾವನೆಗಳನ್ನು ನೋಯಿಸಿದರೆ, ಅಭಿಮಾನಿಗಳು ನಿರ್ದಿಷ್ಟ ರೀತಿಯಲ್ಲಿ ಪ್ರತಿಕ್ರಿಯಿಸುವುದು ‘ಬಹಿರಂಗವಾಗಿಯೇ ವಿನಃ ನಡೆಯುವ ಪ್ರತಿಯೊಂದು ಘಟನೆಗೂ ಅವರೇ ಕಾರಣಕರ್ತರು ಆಗೋದಿಲ್ಲ.
ನಡೆದಿರುವ ಕೃತ್ಯ ಖಂಡನೀಯ. ಯಾರೋ ಮಾಡಿದ ತಪ್ಪನ್ನು ಮತ್ತೊಬ್ಬರ ಮೇಲೆ ಹಾಕುವುದರಿಂದ “ಸುಳ್ಳು ಸತ್ಯವಾಗುವುದಿಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ, ತಪ್ಪಿತಸ್ಥ ಯಾರೇ ಆಗಿದ್ದರೂ ಅವರಿಗೆ ಶಿಕ್ಷೆ ಖಂಡಿತ ಆಗುತ್ತದೆ
ಕಾಣದ ಕೈಗಳು ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರೂ. ಕಾಣುವ ಬುದ್ಧಿ ನಮ್ಮದಾಗಿರಲಿ ಎಂದಿದ್ದಾರೆ.

