HomeExclusive Newsಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯೊಂದಿಗೆಮ ನಾಡಗೀತೆಯನ್ನೂ ಮೊಳಗಿಸಿ: ಸಿಎಂಗೆ ನಟ ಝೈದ್ ಖಾನ್ ಮನವಿ

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯೊಂದಿಗೆಮ ನಾಡಗೀತೆಯನ್ನೂ ಮೊಳಗಿಸಿ: ಸಿಎಂಗೆ ನಟ ಝೈದ್ ಖಾನ್ ಮನವಿ

ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕಬೇಕೆಂದು ಯುವ ನಟ ಝೈದ್‌ ಖಾನ್ ಇಂದು‌ ಸಿಎಂ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತಾನಾಡಿದ ಝೈದ್‌ ಖಾನ್‌, ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವವನ್ನುಇಂದಿನ ಮತ್ತು ಮುಂದಿನ ಪೀಳಿಗೆಗೆ ಸಾರಬೇಕು. ಮುಖ್ಯಮಂತ್ರಿಗಳು ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯೂ ಮೊಳಗುವಂತೆ ಮಾಡಬೇಕು ಎಂಬುದಾಗಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಚಲನಚಿತ್ರ ಮಂಡಳಿಯವರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಎಂದರು.


ಬನಾರಸ್ ಚಿತ್ರಕ್ಕೆ ಕೇಳಿ ಬರುತ್ತಿರುವ ಬೈಕಾಟ್ ಕೂಗಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಒಬ್ಬ ಕಲಾವಿದ. ಪ್ರಾಮಾಣಿಕವಾಗಿ ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದೇನೆ. ಇದರಲ್ಲಿ ನನ್ನದೇನು ತಪ್ಪಿದೆ? ಸೋಲು ಮತ್ತು ಗೆಲುವು ಎರಡನ್ನೂ ಸಮನಾಗಿ ತೆಗೆದುಕೊಳ್ಳುವ ಸ್ವಭಾವ ನನ್ನದು. ನಾನೂ ಈ ನೆಲದ ಕಲಾವಿದ.

ಜನ ಚಿತ್ರ ನೋಡಿ ಆಶೀರ್ವದಿಸುತ್ತಾರೆ ಎಂದು ನಂಬಿದ್ದೇನೆ ಎಂದು ಹೇಳಿದರು.
ಈ ವೇಳೆ ವಿವಿಧ ಕನ್ನಡಪರ ಸಂಘಟನೆ, ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಮತ್ತಿತರರು ಝೈದ್ ಖಾನ್ ಅವರೊಂದಿಗಿದ್ದರು.

RELATED ARTICLES

Most Popular

Share via
Copy link
Powered by Social Snap